ನವದೆಹಲಿ: ಮಾಜಿ ವಿದ್ಯಾರ್ಥಿ ಮುಖಂಡ ಕನ್ನಯ್ಯ ಕುಮಾರ್ ಹಾಗೂ ಗುಜರಾತ್ ನ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಮುಂದಿನ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ ಡಿಟಿವಿ ವರದಿ ಮಾಡಿದೆ.
ಇದನ್ನೂ ಓದಿ:ಗೃಹ ಸಚಿವ ಆರಗ ಜ್ಞಾನೇಂದ್ರ ಮೊಮ್ಮಗನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಅಕ್ಟೋಬರ್ 2ರ ಮಹಾತ್ಮ ಗಾಂಧಿ ಜನ್ಮ ಜಯಂತಿಯಂದು ಇಬ್ಬರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಸೆಪ್ಟೆಂಬರ್ 28ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಈ ಮೊದಲು ನಿಗದಿಯಾಗಿತ್ತು. ಆದರೆ ಇದೀಗ ದಿನಾಂಕ ಮುಂದೂಡಿಕೆಯಾಗಿದೆ ಎಂದು ವರದಿ ಹೇಳಿದೆ.
ಜಿಗ್ನೇಶ್ ಮೇವಾನಿ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ನ ಸಂಚಾಲಕರಾಗಿದ್ದಾರೆ. 2004ರಲ್ಲಿ ಮೇವಾನಿ ಮುಂಬೈನಲ್ಲಿ ಗುಜರಾತ್ ಭಾಷೆಯ ಅಭಿಯಾನ್ ಮ್ಯಾಗಜಿನ್ ನಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.
ಸಾಮಾಜಿಕ ಕಾರ್ಯಕರ್ತರಾಗುವ ಮೊದಲು ಮೇವಾನಿ ಮೂರು ವರ್ಷ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಕನ್ನಯ್ಯ ಕುಮಾರ್ ಸಿಪಿಎಂ ಪಕ್ಷದಲ್ಲಿದ್ದು, ತಮ್ಮ ಬೆಂಬಲಿಗರೊಂದಿಗೆ ಕುಮಾರ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.