ಮಂಗಳೂರು: ಕಂಕನಾಡಿ ಹಳೆ ರಸ್ತೆಯನ್ನು ಮಾ. 20 ರಿಂದ ಮುಂದಿನ ಅದೇಶದವರೆಗೆ ಏಕಮುಖ ರಸ್ತೆಯನ್ನಾಗಿ ಘೋಷಿಸಿ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಆದೇಶ ಹೊರಡಿಸಿದ್ದಾರೆ.
ಆದೇಶದಂತೆ, ಕಂಕನಾಡಿ ವೃತ್ತದಿಂದ ಪಂಪ್‌ವೆಲ್ ಕಡೆಗೆ ಓಲ್ಡ್ ಕಂಕನಾಡಿ ಬೈಪಾಸ್ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಫಳ್ನೀರ್ (ಮದರ್ ತೆರೆಸಾ ರಸ್ತೆ) ರಸ್ತೆಯಿಂದ ಪಂಪ್‌ವೆಲ್ ಕಡೆಗೆ ಹೋಗುವ ಎಲ್ಲಾ ತರದ ವಾಹನಗಳು ಕಂಕನಾಡಿ ಜಂಕ್ಷನ್‌ನಲ್ಲಿ ಎಡಕ್ಕೆ ತಿರುಗಿ ಕರಾವಳಿ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಪಂಪ್‌ವೆಲ್ ಕಡೆಗೆ ಸಂಚರಿಸುವುದು.
ಮಂಗಳಾದೇವಿ, ವೆಲೆನ್ಸಿಯಾ ಕಡೆಯಿಂದ ಪಂಪ್‌ವೆಲ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಕಂಕನಾಡಿ ಜಂಕ್ಷನ್‌ನಲ್ಲಿ ನೇರವಾಗಿ ಕರಾವಳಿ ಜಂಕ್ಷನ್ ಕಡೆಗೆ ಸಂಚರಿಸಿ ಕರಾವಳಿ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಪಂಪ್‌ವೆಲ್ ಕಡೆಗೆ ಸಂಚರಿಸಬೇಕು ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Related Articles
ಇದನ್ನೂ ಓದಿ: ಬನಹಟ್ಟಿಯಲ್ಲಿ ಸಹೋದರಿಯರ ಕೊಲೆ ಪ್ರಕರಣ: ಪೊಲೀಸರಿಂದ ಆರೋಪಿಯ ಬಂಧನ