ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್ ಅವರು ಜಪ್ಪಿನಮೊಗರು ಕಡೆಕಾರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ದಾಳಿ ನಡೆಸುವಂತೆ ಭಜಂತ್ರಿ ಅವರಿಗೆ ಸೂಚಿಸಿದ್ದರು. ಆದರೆ ಈ ಆದೇಶವನ್ನು ಅವರು ನಿರ್ಲಕ್ಷಿಸಿದ್ದರು. ಈ ಬಗ್ಗೆ ಎಸಿಪಿಯವರು ಆಯುಕ್ತರಿಗೆ ದೂರು ನೀಡಿದ್ದರು. ಜತೆಗೆ ಅವರು ವಾಸವಾಗಿದ್ದ ಅಪಾರ್ಟ್‌ಮೆಂಟ್ ನಿವಾಸಿಗಳೂ ಅವರ ವರ್ತನೆ ಕುರಿತಂತೆ ಆಯುಕ್ತರಿಗೆ ದೂರಿತ್ತಿದ್ದರು. ಕಮಿಷನರ್ ಅವರೇ ಭಜಂತ್ರಿ ಅವರಲ್ಲಿ ಪ್ರತಿಕ್ರಿಯೆ ಕೇಳಿದಾಗಲೂ ಉಡಾಫೆಯಿಂದ ವರ್ತಿಸಿದ್ದಾರೆಂಬ ಆರೋಪವೂ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಅವರು ಭಜಂತ್ರಿ ಅವರನ್ನು ಅಮಾನತುಗೊಳಿಸಿದ್ದಾರೆ.
Advertisement
ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿದ್ದಾಗಲೂ ಅಧಿಕಾರಿಗಳು, ಸಾರ್ವಜನಿಕರ ಜತೆ ಉಡಾಫೆಯಿಂದ ವರ್ತಿಸಿದ್ದ ಹಿನ್ನೆಲೆಯಲ್ಲಿ ಅವರು ಅಮಾನತುಗೊಂಡಿದ್ದರು.