Advertisement

ಹಿಂದಿ ಹೇರಿಕೆಗೆ ಕನ್ನಡಿಗರು ಮಣಿಯಬಾರದು: ನಿಖಿಲ್ ಕುಮಾರಸ್ವಾಮಿ

06:13 PM Jun 15, 2022 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ಕನ್ನಡಿಗರು ಮಣಿಯಬಾರದು. ಇದು ಮುಂದೆ ನಮ್ಮ ನೆಲ, ಜಲದ ಮೇಲೆ ಪರಿಣಾಮ ಬೀರುತ್ತದೆ ಎಂದು ಜೆಡಿಎಸ್‌ ಯುವ ಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬುಧವಾರ ನಡೆದ ಸಾಮಾಜಿಕ ಜಾಲತಾಣ ಕಾರ್ಯಕರ್ತರ ಸಂಘಟನಾ ಸಭೆ ನಡೆಯಿತು. ಇದಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ರಾಜ್ಯದಲ್ಲಿ ನಡೆಯುವ ಬಿಜೆಪಿ ಕಾರ್ಯಕ್ರಮಗಳಲ್ಲಿ ಹಿಂದಿ ಭಾಷೆಯನ್ನೇ ಹೆಚ್ಚಾಗಿ ಬಳಸಲಾಗುತ್ತಿದೆ. ಪ್ರಾದೇಶಿಕ ಭಾಷೆಯಾದ ಕನ್ನಡವನ್ನು ಬಳಸುತ್ತಿಲ್ಲ ಇದು ದೊಡ್ಡ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ಹಿಂದೆ ಹೇರಿಕೆಗೆ ಕನ್ನಡಿಗರು ಮಣಿಯಬಾರದು. ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ನಮ್ಮ ನೆಲ, ಜಲದ ಮೇಲೆ ದೊಡ್ಡ ಮಟ್ಟದ ಪರಿಣಾಮ ಬೀರಲಿದೆ. ಇದಕ್ಕೆ ಜೆಡಿಎಸ್‌ ಅವಕಾಶ ಮಾಡಿಕೊಡುವುದಿಲ್ಲ. ಮೈಸೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಅಲ್ಲೂ ಕೂಡಾ ಹಿಂದಿಯ ಫ್ಲೆಕ್ಸ್‌, ಬ್ಯಾನರ್ಸ್‌ ಬಳಸಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ. ಈಗಲಾದರೂ ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು ಎಂದು ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು.

ಸಾಮಾಜಿಕ ಜಾಲತಾಣ ಕಾರ್ಯಕರ್ತರ ಸಭೆ ಕುರಿತು ಹೇಳಿದ ನಿಖೀಲ್‌ ಕುಮಾರಸ್ವಾಮಿ, ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್ ಅನ್ನು ಬಹಳ ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಬಹುದು. ಪಾಸಿಟಿವ್‌ ಆಗೂ ಬಳಕೆ ಮಾಡಿಕೊಳ್ಳಬಹುದು, ನೆಗೆಟಿವ್‌ ಆಗೂ ಬಳಸಿಕೊಳ್ಳ ಬಹುದು. ಆದರೆ, ಎಲ್ಲೂ ಕೂಡ ನೆಗೆಟಿವಿಟಿಗೆ ಆಸ್ಪದ ಕೊಡದೆ ಪಾಸಿಟಿವ್‌ ಆಗಿ ಬಳಸಿಕೊಳ್ಳುವಂತೆ ಇಂದು ನಮ್ಮ ಕಾರ್ಯಕರ್ತರಿಗೆ ಸಂದೇಶ ನೀಡಬೇಕಿದೆ. ಆ ನಿಟ್ಟಿನಲ್ಲಿ ಈ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

ನನಗೆ ಮಾಹಿತಿ ಇಲ್ಲ:
ರಾಷ್ಟ್ರಪತಿ ಚುನಾವಣೆ ಹಿನ್ನೆಲೆ ಮಮತಾ ಬ್ಯಾನರ್ಜಿ ಅವರು ಪ್ರಾದೇಶಿಕ ಪಕ್ಷಗಳ ಮುಖಂಡರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್‌.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಭಾಗಿಯಾಗಿದ್ದಾರೆ. ಕಳೆದ ಬಾರಿ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ. ಚಂದ್ರಶೇಖರರಾವ್‌ ಅವರ ಭೇಟಿ ವೇಳೆ ಕೂಡಾ ರಾಷ್ಟ್ರಮಟ್ಟದ ರಾಜಕಾರಣದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಆದ್ರೆ, ರಾಷ್ಟ್ರಪತಿ ಚುನಾವಣೆಗೆ ಜೆಡಿಎಸ್‌ ವರಿಷ್ಠರಾದ ದೇವೇಗೌಡರ ಸ್ಫರ್ಧೆ ವಿಚಾರವಾಗಿ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next