Advertisement
ಇದು ವಿಚಿತ್ರವೆನಿಸಿದರೂ ಸತ್ಯ. ಆರು ದಶಕಗಳಿಂದ ನಮ್ಮ ಲಾಂಛನದಲ್ಲಿರುವ “ಸತ್ಯಮೇವ ಜಯತೇ’ ಹಿಂದಿಯಲ್ಲೇ ಇದೆ. ಕನ್ನಡ ಇಗೆ ಬದಲಾಯಿಸಿಲ್ಲ.
Related Articles
Advertisement
1957ರಲ್ಲಿ ರೂಪಿತವಾಗಿದ್ದ ಲಾಂಛನ:
ಕರ್ನಾಟಕ ಸರಕಾರದ ಅಧಿಕೃತ ಲಾಂಛನ ರೂಪುಗೊಂಡದ್ದು 1957ರಲ್ಲಿ. ಅಂದಿನಿಂದ ಇದುವರೆಗೆ ಅದೇ ಉಳಿದುಕೊಂಡಿದೆ. ಇತ್ತೀಚೆಗೆ ಕೆಲವು ಕನ್ನಡಾಭಿಮಾನಿಗಳು, ಸಂಘಟನೆಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೂ ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹಾಕುತ್ತಿದ್ದಾರೆ.
ಲಾಂಛನದಲ್ಲಿ ಕನ್ನಡ ಬಳಕೆ ಮಾಡುವಂತೆ ಯಾವುದೇ ಪ್ರಸ್ತಾವ ಬಂದಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ.– ಸುನಿಲ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ
ಎಲ್ಲವೂ ಕನ್ನಡ ಇರಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಲಾಂಛನದಲ್ಲಿ ಕನ್ನಡ ಬಳಕೆಗೆ ಸರಕಾರದ ಮಟ್ಟದಲ್ಲಿ ನಿರ್ಧಾರ ಆಗಬೇಕಿರುವುದರಿಂದ ಅವರೇ ತೀರ್ಮಾನಿಸಬೇಕು.– ಟಿ.ಎಸ್. ನಾಗಾಭರಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ