Advertisement

ಗೃಹ ಸಚಿವರಿಗೆ 1 ಲಕ್ಷ ರೂ. ಚೆಕ್ ಹಸ್ತಾಂತರ|ನುಡಿದಂತೆ ನಡೆದ ನಟ ಜಗ್ಗೇಶ್

08:18 PM Aug 28, 2021 | Team Udayavani |

ಬೆಂಗಳೂರು : ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಬಹುಮಾನ ಘೋಷಿಸಿದ್ದ ನಟ ಜಗ್ಗೇಶ್ ಅವರು ಇಂದು (ಆ.28) ಸಂಜೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ 1 ಲಕ್ಷ. ರೂ. ಮೌಲ್ಯದ ಚೆಕ್ ಹಸ್ತಾಂತರಿಸಿದರು.

Advertisement

ಮೈಸೂರು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ಸಿಬ್ಬಂದಿಗೆ ನವರಸ ನಾಯಕ ಜಗ್ಗೇಶ್ ಅವರು ಅಭಿನಂದನೆ ಸಲ್ಲಿಸಿ, ಈ ಖಾಕಿ ತಂಡಕ್ಕೆ ವೈಯಕ್ತಿಕವಾಗಿ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಇಂದು ಮುಂಜಾನೆ ಹೇಳಿದ್ದರು. ಇದೀಗ ನುಡಿದಂತೆ ನಡೆದಿರುವ ಅವರು ಪತ್ನಿ ಸಮೇತ ಗೃಹ ಸಚಿವರನ್ನು ಭೇಟಿ ಮಾಡಿ ಚೆಕ್ ನ್ನು ಹಸ್ತಾಂತರಿಸಿದ್ದಾರೆ.

ಇನ್ನು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶದಲ್ಲಿ ಕಳೆದ ಆ.24ರಂದು ಸಾಯಂಕಾಲ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಸತತ 85 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ  ಶನಿವಾರ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರು ತಮಿಳು ನಾಡಿನ ತಿರುಪುರ್ ಮೂಲದವರಾಗಿದ್ದು ಕೂಲಿ ಕಾರ್ಮಿಕರಾಗಿದ್ದು ಅವಿದ್ಯಾವಂತರು ಕೂಡ. ಚಾಲಕ, ಕಾರ್ಪೆಂಟರ್ ನಂತಹ ಕೂಲಿ ಕೆಲಸ ಮಾಡುತ್ತಿದ್ದರು. ಮೈಸೂರಿಗೆ ತರಕಾರಿ ತೆಗೆದುಕೊಂಡು ಮಂಡಿಗೆ ಬಂದು ಹೋಗುತ್ತಿದ್ದರು. ಹೀಗೆ ಮೊನ್ನೆ ಬಂದಿದ್ದವರು ಈ ಕುಕೃತ್ಯ ನಡೆಸಿದ್ದು ಅವರಲ್ಲಿ 17 ವರ್ಷದ ಒಬ್ಬ ಬಾಲ ಆರೋಪಿ ಕೂಡ ಇದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next