Advertisement
ʼಬ್ಯಾಚುಲರ್ ಪಾರ್ಟಿʼ(Bachelor party) ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಅವರ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ನವೀನ್ ಕುಮಾರ್ ಎನ್ನುವವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
Related Articles
1.ತರಗತಿಯೊಂದರಲ್ಲಿ ಶಾಲಾ ಬಾಲಕಿ -”ಒಮ್ಮೆ ನಿನ್ನನ್ನು” ಹಾಡನ್ನು ಸಹಪಾಠಿಗಳ ಮುಂದೆ ಹಾಡುವುದು
2. ಮನೆಯ ಟಿವಿಯಲ್ಲಿ ”ನ್ಯಾಯ ಎಲ್ಲಿದೆ” ಹಾಡಿನ ಪ್ರಸಾರ
Advertisement
ಈ ಮುಂಚೆ ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮಾ ತೆರೆಕಾಣುವುದಕ್ಕೂ ಮುನ್ನವೇ ನಾವು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಮುಖ್ಯಸ್ಥರೊಂದಿಗೆ ಈ ಕುರಿತು ಮಾತುಕತೆ ನಡೆಸಿದ್ದೆವು. ಆದರೆ, ಅವರು ನಮ್ಮ ಮುಂದೆ ಇತ್ತ ಶುಲ್ಕ ನಮ್ಮ ಬಜೆಟ್ ಅನ್ನು ಮೀರಿತ್ತು. ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಶುಲ್ಕದ ಕುರಿತು ಮಾತುಕತೆಗೆ ತಯಾರಿರಲಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐಆರ್ ದಾಖಲಾಗಿದೆ. ಇದು ನಿಜವಾಗಿ ಹಾಡಿನ ಹಕ್ಕು ಉಲ್ಲಂಘನೆಯೇ ? ಹೌದಾಗಿದ್ದೆ ಆಗಿದ್ದಲ್ಲಿ ನಾವು ತೆರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂಆರ್‌ಟಿ ಸಂಸ್ಥೆಯಿಂದ ಕೇಳಲ್ ಪಟ್ಟಿದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ. ಹಾಗಾಗಲಿ, ನ್ಯಾಯ ಮತ್ತು ಪ್ರಬುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯ ಸ್ಥಾನದಲ್ಲಿಯೇ ನಿರ್ಧಾರವಾಗಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿನಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು ನಮ್ಮ ಈ ಪ್ರಾಮಾಣಿಕ ಪ್ರಯತ್ನ, ನಿಮ್ಮ ಬೆಂಬಲ ಮತ್ತು ಪ್ರೀತಿಯನ್ನು ಆಶಿಸುವ ಪರಂವಃ ಸ್ಟುಡಿಯೋಸ್ ” ಎಂದು ಪೋಸ್ಟ್ ಮಾಡಿದ್ದಾರೆ.