Advertisement

ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

01:30 PM Oct 18, 2021 | Team Udayavani |

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಶಂಕರ್ ರಾವ್ ಇಂದು ಬೆಳಗ್ಗೆ 6.30ರ ಸುಮಾರಿಗೆ ಅರಕೆರೆಯ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

Advertisement

ಹವ್ಯಾಸಿ ರಂಗಭೂಮಿ ಕಲಾವಿದರಾಗಿದ್ದ ಇವರಿಗೆ 84 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಇವರು, ಪ್ರಸಿದ್ಧ ಧಾರಾವಾಹಿ “ಪಾಪ ಪಾಂಡು” ಇದರಲ್ಲಿ ಮೆನೆಮಾತಾಗಿದ್ದರು. ಹಿರಿಯ ನಟನ ನಿಧನಕ್ಕೆ ಚಂದನವನದ ನಟರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಬನಶಂಕರಿ ಚಿತಾಗಾರದಲ್ಲಿ  ಶಂಕರ್ ರಾವ್ ಅಂತ್ಯಕ್ರೀಯೆ ನೆರವೆರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next