Advertisement

ಹೊಸ ಚಿತ್ರದಲ್ಲಿ ಚಾಕಲೇಟ್ ಬಾಯ್ ಸುಮುಖ

05:49 PM Apr 04, 2023 | Team Udayavani |

‘ಫಿಸಿಕ್ಸ್‌ ಟೀಚರ್‌’ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ನವ ನಟ ಸುಮುಖ ಈಗ ಹೊಸ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಈ ಚಿತ್ರದಲ್ಲಿ ಶೈನ್‌ ಶೆಟ್ಟಿ ಹಾಗೂ ನಿಧಿ ಹೆಗಡೆ ಇವರ ಸಹನಟರಾಗಿದ್ದಾರೆ.

Advertisement

ಇನ್ನೂ ಹೆಸರಿಡಬೇಕಾದ, ಸ್ನೇಹ ಹಾಗೂ ಸಹೋದರತ್ವದ ಸಂದೇಶ ಹೊತ್ತಿರುವ, ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಸಕಲೇಶಪುರದಲ್ಲಿ ಮುಗಿದಿದೆ.

ನಿರ್ದೇಶಕ ಉದಯ್‌ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಕನ್ನಡ ಹಾಗೂ ಮರಾಠಿಯಲ್ಲಿ ನಿರ್ಮಾಣವಾಗಿರುವ ದ್ವಿಭಾಷೆಯ ಚಿತ್ರ ರಾಜಸ್ಥಾನ ಡೈರೀಸ್‌ ತೆರೆಗೆ ಬರಲು ಸಿದ್ಧವಾಗಿದ್ದು, ಈ ಚಿತ್ರದಲ್ಲಿ ಮಾನ್ವಿತ ಕಾಮತ್‌ ಜೋಡಿಯಾಗಿ ಸುಮುಖ ನಟಿಸಿದ್ದಾರೆ.

ಇದೊಂದು ಔಟ್‌ ಆ್ಯಂಡ್‌ ಔಟ್‌ ಲವ್‌ ಸ್ಟೋರಿಯಾಗಿದೆ. ಮರಳುಗಾಡಿನ ಸೌಂದರ್ಯದ ಜೊತೆ ಜೊತೆಗೆ ಹೆಣೆದಿರುವ ಪ್ರೇಮಕಥೆಗೆ ಅರ್ಜುನ ಜನ್ಯ ಸಂಗೀತ ನೀಡಿದ್ದಾರೆ. ಸುಮುಖ ಅವರ ತಾಯಿ ನಂದಿತಾ ಯಾದವ್‌ ಚಿತ್ರಕಥೆ ಹಾಗೂ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next