Advertisement

Kannada Actor: ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲು

12:00 PM Jun 12, 2024 | Team Udayavani |

ಬೆಂಗಳೂರು: ಕನ್ನಡ ಚಿತ್ರರಂಗದ ನಟ ವಿನೋದ್‌ ರಾಜ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಕರುಳಿನ ಸಮಸ್ಯೆಯಿಂದ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

Advertisement

ತಾಯಿ ಲೀಲಾವತಿ ಅವರ ನಿಧನದ ಬಳಿಕ ಅವರು ಸಮಾಜಮುಖಿ ಕೆಲಸವನ್ನು ಮಾಡುತ್ತಾ ದಿನ ಕಳೆಯುತ್ತಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

11 ವರ್ಷಗಳ ಹಿಂದೆ ವಿನೋದ್‌ ಅವರು ಹಾರ್ಟ್ ಆಪರೇಷನ್‌ಗೆ ಒಳಗಾಗಿದ್ದರು. ಈ ವೇಳೆ ಅವರ ಹಾರ್ಟ್‌ ಗೆ ಸ್ಟಂಟ್‌ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್‌ ಪರಿಣಾಮದಿಂದ ಅವರಿಗೆ ಕರುಳಿನ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಇದೀಗ ಅವರಿಗೆ ಆಪರೇಷನ್‌ ಮಾಡಲಾಗಿದ್ದು, ಇನ್ನು ಎರಡು – ಮೂರು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ ಎಂದು ವರದಿಯಾಗಿದೆ.

ಚಂದನವನದಲ್ಲಿ ನಟನಾಗಿ ಗುರುತಿಸಿಕೊಂಡಿರುವ ಅವರು, ಡ್ಯಾನ್ಸ್ ರಾಜಾ ಡ್ಯಾನ್ಸ್, ಶ್ರೀ ವೆಂಕಟೇಶ್ವರ ಮಹಿಮೆ, ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನನಗು ಹೆಂಡ್ತಿ ಬೇಕು, ಯುದ್ಧ ಪರ್ವ, ನಾಯಕ, ಬನ್ನಿ ಒಂದ್ಸಲಾ ನೋಡಿ, ಗಿಳಿ ಬೇಟೆ ಎಂಬ ಸಿನಿಮಾಗಳಲ್ಲಿ ನಟಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next