ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ತೆಗೆದುಕೊಳ್ಳುವಂತೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ನಟಿ ಸಂಜಾನರನ್ನು ಮಡಿವಾಳದಲ್ಲಿರುವ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ನಟಿ ಸಂಜನಾ ಗಲ್ರಾನಿಯನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ತೆಗೆದುಕೊಳ್ಳುವಂತೆ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ನಟಿ ಸಂಜಾನರನ್ನು ಮಡಿವಾಳದಲ್ಲಿರುವ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ಇಂದು ಮುಂಜಾನೆ ಸಿಸಿಬಿ ಅಧಿಕಾರಿಗಳು ನಟಿಯ ಮನೆಗೆ ದಾಳಿ ಮಾಡಿ ತಪಾಸಣೆ ನಡೆಸಿದ್ದರು. ಸುಮಾರು ಮೂರು ಗಂಟೆಗಳ ಕಾಲ ತಪಾಸಣೆ ಮಾಡಿದ ಸಿಸಿಬಿ ಅಧಿಕಾರಿಗಳು ನಂತರ ನಟಿ ಸಂಜನಾ ಗಲ್ರಾನಿ ಅವರನ್ನು ವಶಕ್ಕೆ ಪಡೆದು ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗಿದ್ದರು. ಚಾಮರಾಜ ಪೇಟೆಯ ಸಿಸಿಬಿ ಕಚೇರಿಯಲ್ಲಿ ಸುಮಾರು ಎರಡು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ನಂತರ ಸಂಜನಾ ಅವರನ್ನು ಬಂಧಿಸಿದರು.
ಬೆಂಗಳೂರಿನ ಇಂದಿರಾನಗರದಲ್ಲಿರುವ ಸಂಜನಾ ಗಲ್ರಾನಿ ನಿವಾಸದ ಮೇಲೆ ಇಂದು ಬೆಳಗಿನ ಜಾವ ಇನ್ಸ್ ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು, ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು.
ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ದ ಮಾಹಿತಿ ಹೊರಬೀಳುತ್ತಿದ್ದಂತೆ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು. ನಟಿ ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ ನಂತರ ನಟಿ ರಾಗಿಣಿಯ ಮನೆಗೂ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.
ನಂತರ ನಟಿ ರಾಗಿಣಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಸೋಮವಾರ ಮತ್ತೆ ರಾಗಿಣಿ ಅವರನ್ನು ಐದು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ.
2006ರಲ್ಲಿ ತಮಿಳು ಚಿತ್ರ ಒರು ಕಾದಲ್ ಸೀವೀರ್ ಚಿತ್ರದ ಮೂಲಕ ಚಿತ್ರ ಜಗತ್ತಿಗೆ ಕಾಲಿಟ್ಟಿದ್ದ ಸಂಜನಾ ಗಂಡ ಹೆಂಡತಿ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದರು. ನಂತರ ಈ ಸಂಜೆ, ಮೈಲಾರಿ, ದಂಡುಪಾಳ್ಯ ಮುಂತಾದ ಚಿತ್ರಗಳಲ್ಲಿ ಸಂಜನಾ ನಟಿಸಿದ್ದಾರೆ.