Advertisement
ನಗರದ ಮಾರಿಗುಡಿ ಮುಂಭಾಗದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಾರತ ಅಮೃತ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Related Articles
Advertisement
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ಸ್ವಾತಂತ್ರ್ಯ ಪಡೆದು 75 ವರ್ಷಗಳನ್ನು ಪೂರೈಸಿರುವ ಭಾರತವನ್ನು ಇಡೀ ಜಗತ್ತು ಭಾವನಾತ್ಮಕವಾಗಿ ಅಪ್ಪಿಕೊಂಡಿದೆ. ಸ್ವಾತಂತ್ರ್ಯ ಹೋರಾಟಗಾರರು ಎಂದೂ, ಯಾವತ್ತೂ ಸಹ ಸ್ವಾರ್ಥಿಗಳಾಗಲಿಲ್ಲ. ಅವರ ಹೋರಾಟದ ಫಲವನ್ನು ನೆಮ್ಮದಿಯಿಂದ ಅನುಭವಿಸುತ್ತಿದ್ದೇವೆ. ಭಾರತೀ ಯರಾದ ನಾವೆಲ್ಲರೂ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ದೇಶವನ್ನು ಇನ್ನಷ್ಟು ಉತ್ತಮ ಸ್ಥಿತಿಗೆ ಕೊಂಡೊಯ್ಯಬೇಕಾಗಿದೆ ಎಂದರು. ಕರ್ನಾಟಕ ಜಾನಪದ ಅಕಾಡಮಿ ಸದಸ್ಯಸಿ.ಎಂ. ನರಸಿಂಹಮೂರ್ತಿ ಭಾರತ ಸ್ವಾತಂತ್ರ್ಯಹೋರಾಟದಲ್ಲಿ ಭಾಗವಹಿಸಿ ಕೊಡುಗೆ ನೀಡಿದ ಜಿಲ್ಲೆಯ 40 ಮಂದಿ ಸ್ವಾತಂತ್ರ್ಯಹೋರಾಟ ಗಾರರನ್ನು ಸ್ಮರಿಸಿದರು.
ನಗರಸಭೆ ಸದಸ್ಯರಾದ ಗಾಯತ್ರಿ ಚಂದ್ರ ಶೇಖರ್, ಭಾಗ್ಯಮ್ಮ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಕಾತ್ಯಾಯಿನಿದೇವಿ, ನಗರಸಭೆ ಪೌರಾಯುಕ್ತ ಕರಿಬಸವಯ್ಯ, ನಾಮನಿರ್ದೇಶಿತ ಸದಸ್ಯ ಚಂದ್ರು, ತಹಶೀಲ್ದಾರ್ ಬಸವರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರೇಮ್‌ಕುಮಾರ್, ಮೈಸೂರು ವಿ.ವಿ.ಸಿಂಡಿಕೇಟ್ ಸದಸ್ಯ ಪ್ರದೀಪ್‌ಕುಮಾರ್ ದೀಕ್ಷಿತ್, ಕಾರ್ಯಕ್ರಮ ಸಂಯೋಜಕ ಅಶ್ವಿನ್ ಇತರರು ಇದ್ದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಗಣ್ಯರು ಎನ್. ಸುಂದ್ರೇಶ್ ರಚಿಸಿರುವ ಭಾರತ ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆ ಕುರಿತ ಪುಸ್ತಕ ಬಿಡುಗಡೆ ಮಾಡಿದರು.
ಮೆರವಣಿಗೆಗೆ ಎಡೀಸಿ ಕಾತ್ಯಾಯಿನಿದೇವಿ ಚಾಲನೆ : ನಗರದ ಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿ ನಗರಸಭಾ ಅಧ್ಯಕ್ಷೆ ಆಶಾ ನಟರಾಜು, ಚೂಡಾ ಶಾಂತಮೂರ್ತಿ ಕುಲಗಾಣ, ಎಡೀಸಿ ಕಾತ್ಯಾಯಿನಿದೇವಿ ಹಸಿರು ನಿಶಾನೆ ತೋರುವ ಮೂಲಕ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಕಲಾತಂಡಗಳೊಂದಿಗೆ ಮರವಣಿಗೆಯಲ್ಲಿ ವೀರಗಾಸೆ, ಡೊಳ್ಳುಕುಣಿತ, ನಾದಸ್ವರ, ಬ್ಯಾಂಡ್‌ಸೆಟ್, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣದ ಮಕ್ಕಳು, ಶಾಲಾಮಕ್ಕಳು, ವಿವಿಧ ಸ್ತ್ರೀಶಕ್ತಿ ಸಂಘದ ಸದಸ್ಯರು, ಸಂಘ ಸಂಸ್ಥೆಗಳು ಭಾಗವಹಿಸಿದ್ದವು. ಚಾಮರಾಜೇಶ್ವರ ದೇವಸ್ಥಾನದಿಂದ ಹೊರಟ ಮೆರವಣಿಗೆಯು ಭುವನೇಶ್ವರಿ ವೃತ್ತ, ಕೆಎಸ್‌ಆರ್ ಟಿಸಿ ಬಸ್ ನಿಲ್ದಾಣ, ದೇವಾಂಗ ಬೀದಿ, ಮಹಾವೀರ ವೃತ್ತದ ಮೂಲಕ ಮಾರಿಗುಡಿಯ ಮುಂಭಾಗದ ಆವರಣಕ್ಕೆ ತಲುಪಿತು. ಬಳಿಕ ಮಾರಿಗುಡಿಯ ಆವರಣದಲ್ಲಿ ಭಾರತ ಸ್ವಾತಂತ್ರ್ಯ ಹೋರಾಟವನ್ನು ಬಿಂಬಿಸುವ ಶಿಲಾಫಲಕವನ್ನು ಗಣ್ಯರು ಅನಾವರಣಗೊಳಿಸಿದರು.