Advertisement

19ರಂದು ಮಾನವ ಸಂಪನ್ಮೂಲ ಅಧಿಕಾರಿಗಳ ಕನ್ನಡ ಸಮೇಳನ

11:15 AM Nov 11, 2017 | Team Udayavani |

ಬೆಂಗಳೂರು: ನಿರಾತಂಕ ಸಂಸ್ಥೆ ವತಿಯಿಂದ ನ.19ರಂದು ನಗರದ ಕ್ಯಾಪಿಟಲ್‌ ಹೋಟೆಲ್‌ನಲ್ಲಿ ರಾಜ್ಯಮಟ್ಟದ ಪ್ರಥಮ ಮಾನವ ಸಂಪನ್ಮೂಲ ಕನ್ನಡ ಸಮ್ಮೇಳನ ಹಮ್ಮಿಕೊಂಡಿದೆ.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಂಧಾರ್‌ ಟೆಕ್ನಾಲಜಿಸ್‌ ಸಂಸ್ಥೆಯ ಡಿಜಿಎಂ ಡಾ.ಬಿ.ಕೆ.ಕೆಂಪೇಗೌಡ, ತಮಿಳುನಾಡಿನಲ್ಲಿ ವಿವಿಧ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಮಾನವ ಸಂಪನ್ಮೂಲ ಅಧಿಕಾರಿಗಳು ಒಂದೆಡೆ ಸೇರಿ ತಮ್ಮ ಭಾಷೆಯ ಬೆಳವಣಿಗೆಗಳ ಬಗ್ಗೆ ವಾರ್ಷಿಕ ಸಮೇಳನ ಆಯೋಜಿಸಿ ಚರ್ಚೆ, ಸಂವಾದ ನಡೆಸುತ್ತಾರೆ. ಅದೇ ರೀತಿಯ ಕಾರ್ಯಕ್ರವನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ ಎಂದರು.

ವಿವಿಧ ಕಂಪನಿಗಳ ಸುಮಾರು 300 ಹಿರಿಯ ಮಾನವ ಸಂಪನ್ಮೂಲ ಅಧಿಕಾರಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಗಳಲ್ಲಿ ಕನ್ನಡ ಭಾಷೆ ಬಳಕೆ, ಪ್ರಚಲಿತ ಸಮಸ್ಯೆಗಳು ಮತ್ತು ಪರಿಹಾರಗಳು ಹಾಗೂ ಕಾನೂನಿನ ವ್ಯಾಪ್ತಿಯಲ್ಲಿ ಕನ್ನಡದ ಅವಶ್ಯಕತೆ ಸೇರಿ ಹಲವು ವಿಷಯಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಸಮ್ಮೇಳನದ ಅಂಗವಾಗಿ ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಿಸಿದ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ  ಪ್ರಥಮ ಲೇಖನಕ್ಕೆ 15 ಸಾವಿರ ರೂ. ದ್ವಿತೀಯ ಲೇಖನಕ್ಕೆ 10 ಸಾವಿರ ರೂ. ಮತ್ತು ತೃತೀಯ ಲೇಖನಕ್ಕೆ 5 ಸಾವಿರ ರೂ. ಬಹುಮಾನ ನೀಡಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ: 99800 66890 ಸಂಪರ್ಕಿಸಬಹುದು.

Advertisement

Udayavani is now on Telegram. Click here to join our channel and stay updated with the latest news.

Next