Advertisement

7ರವರೆಗೆ ಕನ್ನಡ ಭವನ ಸೀಲ್‌ಡೌನ್‌

05:47 AM Jul 06, 2020 | Lakshmi GovindaRaj |

ಬೆಂಗಳೂರು: ಕನ್ನಡ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ 5 ಮಂದಿ ಸಿಬ್ಬಂದಿಗೆ ಕೋವಿಡ್ 19 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ (ಜು.7) ದವರೆಗೆ ಭವನವನ್ನು ಸೀಲ್‌ಡೌನ್‌ ಮಾಡಲಾಗಿದೆ. ಕನ್ನಡ ಭವನ  ಬಹುಮಹಡಿ ಕಟ್ಟಡ ಹೊಂದಿದೆ.

Advertisement

ಅಲ್ಲಿ ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಲಲಿತಕಲಾ ಅಕಾಡೆಮಿ, ಕರ್ನಾ ಟಕ ಸಾಹಿತ್ಯ ಅಕಾಡಮಿ, ಕನ್ನಡ ಪುಸ್ತಕ ಪ್ರಾಧಿಕಾರ ಸೇರಿ ಹಲವು ಅಕಾಡೆಮಿಗಳ ಸಿಬ್ಬಂದಿ  ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕನ್ನಡ ಭವನದ 2ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಾನಪದ ಅಕಾಡೆಮಿ ಕಚೇರಿ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿತ್ತು.

ಈಗ ಅದೇ ಅಕಾಡೆಮಿ ಯ ಐವರು ಸಿಬ್ಬಂದಿಗೆ ಕೋವಿಡ್  19 ತಗುಲಿರುವುದು ದೃಢಪಟ್ಟಿದೆ. ಇದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಜು.7ರವರೆಗೂ ಕಾರ್ಯನಿರ್ವಹಿಸದಂತೆ ಸೂಚನೆ ನೀಡಿದ್ದಾರೆ. ಜತೆಗೆ ಸ್ಯಾನಿಟೈಸರ್‌ ಕೂಡ  ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮ ವಹಿಸಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next