Advertisement

Kannada ಸಿನೆಮಾ; ಖಡಕ್‌ ಪೊಲೀಸ್‌ ಆದ ಧನ್ವೀರ್‌

04:30 PM Sep 11, 2024 | Team Udayavani |

ಧನ್ವೀರ್‌ ನಾಯಕರಾಗಿರುವ ‘ಹಯಗ್ರೀವ’ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆಯಾಗಿದೆ. ಈ ಚಿತ್ರ ಕೆ.ವಿ.ಸಿ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ನಿರ್ಮಾಣವಾಗುತ್ತಿದ್ದು, ರಘುಕುಮಾರ್‌ ಓ.ಆರ್‌ ನಿರ್ದೇಶನವಿದೆ. ಧನ್ವೀರ್‌ ಅವರ ಹಯಗ್ರೀವ ಚಿತ್ರದ ಪಾತ್ರ ಏನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿತ್ತು. ಈಗ ಬಿಡುಗಡೆಯಾಗಿರುವ ಪೋಸ್ಟರ್‌ನಲ್ಲಿ ಧನ್ವೀರ್‌ ಖಡಕ್‌ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

Advertisement

ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಹಯಗ್ರೀವ ಚಿತ್ರಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ.

ಧನ್ವೀರ್‌ ಅವರಿಗೆ ನಾಯಕಿಯಾಗಿ ಸಂಜನಾ ಆನಂದ್‌ ಅಭಿನಯಿಸಿದ್ದಾರೆ. ಸಾಧು ಕೋಕಿಲ, ರಮೇಶ್‌ ಭಟ್‌, ಶರತ್‌ ಲೋಹಿತಾಶ್ವ, ಶೋಭರಾಜ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next