Advertisement

ಮುಂಬೈನಲ್ಲಿ ನಿರ್ಮಾಪಕ ಆನಂದ್ ಅಪ್ಪುಗೋಳ್ ಅರೆಸ್ಟ್

03:08 PM Sep 18, 2017 | Sharanya Alva |

ಮುಂಬೈ: ಸಾರ್ವಜನಿಕರ ಠೇವಣಿ ಹಣವನ್ನು ಮರುಪಾವತಿ ಮಾಡದೇ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಪೊಲೀಸರು ಸೋಮವಾರ ಬಂಧಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಸಂಗೊಳ್ಳಿ ರಾಯಣ್ಣ ಸಹಕಾರಿ ಬ್ಯಾಂಕ್ ದಿವಾಳಿ ಪ್ರಕರಣದಲ್ಲಿ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ವಿರುದ್ಧ ಸಾರ್ವಜನಿಕರು ದೂರು ದಾಖಲಿಸಿದ್ದರು. ಬ್ಯಾಂಕ್ ಕಚೇರಿಗೆ ಬೀಗ ಹಾಕಿ ಠೇವಣಿದಾರರಿಗೆ ಮೋಸ ಮಾಡಿರುವುದಾಗಿ ಠೇವಣಿದಾರರು ಆರೋಪಿಸಿದ್ದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ಆನಂದ್ ಅಪ್ಪುಗೋಳ್ ನಿರ್ಮಿಸಿದ್ದರು. ಇದು ಅದ್ದೂರಿ ಬಜೆಟ್ ಚಿತ್ರವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next