Advertisement

Kannada Cinema: ತೆರೆಗೆ ಬಂತು ಯುವ, ತಾರಿಣಿ

10:24 AM Mar 29, 2024 | Team Udayavani |

ಯುವ ರಾಜ್‌ಕುಮಾರ್‌ ನಾಯಕರಾಗಿ ರುವ ಚೊಚ್ಚಲ ಚಿತ್ರ “ಯುವ’ ಇಂದು ತೆರೆಕಾಣುತ್ತಿದೆ. ಹೊಂಬಾಳೆ ಫಿಲಂಸ್‌ ನಿರ್ಮಾಣದ ಈ ಚಿತ್ರವನ್ನು ಸಂತೋಷ್‌ ಆನಂದರಾಮ್‌ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಸಪ್ತಮಿ ಗೌಡ ನಾಯಕಿ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರದ ಮೇಲಿನ ನಿರೀಕ್ಷೆಯೂ ಹೆಚ್ಚಾಗಿದೆ.

Advertisement

“ತಂದೆ – ಮಗನ ಸಂಬಂಧ ಬೇರೆ ರೀತಿಯದೆ ಸಂಬಂಧ. ತಂದೆಯ ಜವಾಬ್ದಾರಿ ನಮಗೆ ಅರ್ಥವಾಗುವುದೇ ಇಲ್ಲ. ನಾವು ದುಡಿಯುವುದಕ್ಕೆ ಶುರು ಮಾಡಿದಾಗ ನಮಗೆ ತಂದೆಯ ಜವಾಬ್ದಾರಿ ತಿಳಿಯುತ್ತಾ ಹೋಗುತ್ತದೆ. ಈ ಚಿತ್ರದಲ್ಲಿ ಅಚ್ಯುತಕುಮಾರ್‌ ಅವರು ನನ್ನ ತಂದೆ ಪಾತ್ರ ಮಾಡಿದ್ದಾರೆ. ಅವರೊಂದಿಗೆ ಕೆಲವು ಸನ್ನಿವೇಶಗಳಲ್ಲಿ ನಟಿಸಬೇಕಾದರೆ ನನಗೆ ನಮ್ಮ ಅಪ್ಪ ಕಣ್ಣ ಮುಂದೆ ಬರುತ್ತಿದ್ದರು’ ಎನ್ನುವುದು ಯುವ ಮಾತು.

ಹೊಸ ಪ್ರಯೋಗದ ಸಿನಿಮಾ ತಾರಿಣಿ

ಈಗಾಗಲೇ ಹಲವು ಪ್ರತಿಷ್ಠಿತ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು, ವಿವಿಧ ವಿಭಾಗಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಮಹಿಳಾ ಪ್ರಧಾನ ಕಥಾಹಂದರದ “ತಾರಿಣಿ’ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ “ತಾರಿಣಿ’ ಸಿನಿಮಾವನ್ನು “ಶ್ರೀಗಜನಿ ಪ್ರೊಡಕ್ಷನ್ಸ್‌’ ಬ್ಯಾನರಿನಲ್ಲಿ ಡಾ. ಸುರೇಶ್‌ ಕೋಟ್ಯಾನ್‌ ಚಿತ್ರಾಪು ಬಂಡವಾಳ ಹೂಡಿ ನಿರ್ಮಿಸಿದ್ದಾರೆ.

ಹೆಣ್ಣು ಭ್ರೂಣ ಹತ್ಯೆ ಕುರಿತಾದ ಕಥಾಹಂದರ ಹೊಂದಿರುವ “ತಾರಿಣಿ’ ಸಿನಿಮಾದಲ್ಲಿ ನಟಿ ಮಮತಾ ರಾಹುತ್‌ ಗರ್ಭಿಣಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ಗರ್ಭಿಣಿಯಾಗಿದ್ದಾಗಲೇ ತೆರೆಮೇಲೆ ಕೂಡ ಮಮತಾ ರಾಹುತ್‌ ಗರ್ಭಿಣಿ ಪಾತ್ರದಲ್ಲೇ ಕಾಣಿಸಿಕೊಂಡಿರು ವುದು ಈ ಸಿನಿಮಾದ ಮತ್ತೂಂದು ವಿಶೇಷ. ಉಳಿದಂತೆ ರೋಹಿತ್‌, ಭವಾನಿ ಪ್ರಕಾಶ್‌, ವಿಜಯ ಲಕ್ಷ್ಮೀ, ಡಾ. ಸುರೇಶ್‌ ಕೋಟ್ಯಾನ್‌, ಸುಧಾ ಪ್ರಸನ್ನ, ಪ್ರಮಿಳಾ ಸುಬ್ರಹ್ಮಣ್ಯಂ, ಮಟಿಲ್ಡಾ ಡಿಸೋಜಾ, ದೀಪಿಕಾ ಗೌಡ, ತೇಜಸ್ವಿನಿ, ಶ್ವೇತಾ ನಟಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next