Advertisement
ಸರ್ಕಾರದ ಆದೇಶ ರದ್ದು ಕೋರಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
Related Articles
ಸರ್ಕಾರದ ಆದೇಶ ರದ್ದುಕೋರಿ ವಿದ್ಯಾರ್ಥಿಗಳು ಸಹ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ವಿಚಾರವಾಗಿ ಅರ್ಜಿ ಸಲ್ಲಿಸಿರುವ ಬಸವನಗುಡಿ ವಿಜಯಾ ಕಾಲೇಜಿನ 6 ಪದವಿ ವಿದ್ಯಾರ್ಥಿಗಳ ಪರವಾಗಿ ಹಾಜರಿದ್ದ ವಕೀಲ ಶ್ರೀಧರ್ ಪ್ರಭು, ಕನ್ನಡ ಕಡ್ಡಾಯ ಆದೇಶ ಪ್ರಶ್ನಿಸಿ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠ ವಿಭಾಗೀಯ ಪೀಠಕ್ಕೆ ವರ್ಗಾಯಿಸಿತ್ತು. ಮೊದಲ ವರ್ಷ ಪದವಿ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸಂಸ್ಕೃತ ಹಾಗೂ ಆಂಗ್ಲ ಭಾಷೆ ಆಯ್ದುಕೊಳ್ಳಲು ಬಯಸಿದ್ದಾರೆ. ಆದರೆ, ಸರ್ಕಾರದ ಆದೇಶದ ಪ್ರಕಾರ ಕನ್ನಡವನ್ನು ಕಡ್ಡಾಯವಾಗಿ ಆಯ್ಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ತಿಳಿಸಿದರು.
Advertisement
ವಾದ ಆಲಿಸಿದ ನ್ಯಾಯಪೀಠ, ಮುಂದೂಡಿತು. ಅರ್ಜಿಯ ಮುಂದಿನ ವಿಚಾರಣೆ ವರೆಗೆ ಕನ್ನಡ ಕಡ್ಡಾಯ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗದಂತೆ ಸರ್ಕಾರ ಹಾಗೂ ವಿವಿಗಳಿಗೆ ಸೂಚಿಸಿ ವಿಚಾರಣೆಯನ್ನು ಡಿ.16ಕ್ಕೆ ಮುಂದೂಡಿತು.