Advertisement

ಯಾದಗಿರಿ-ಬೀದರನಲ್ಲಿ ಕನ್ನಡದ ಕಂಪು

11:12 AM Oct 29, 2021 | Team Udayavani |

ಯಾದಗಿರಿ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ “ಕನ್ನಡಕ್ಕಾಗಿ ನಾವು’ ಅಭಿಯಾನದ ಭಾಗವಾಗಿ ಇಲ್ಲಿನ ಜಿಲ್ಲಾಡಳಿತ ಭವನದ ಅಡಿಟೊರಿಯಂನಲ್ಲಿ ಗುರುವಾರ ಆಯೋಜಿಸಿದ್ದ ಮಾತಾಡ್‌ ಮಾತಾಡ್‌ ಕನ್ನಡ ಸಾಮೂಹಿಕ ಕನ್ನಡ ಗಾಯನ ಕಾರ್ಯಕ್ರಮ ಜರುಗಿತು.

Advertisement

ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌ ಚಾಲನೆ ನೀಡಿದರು. ಜಿಲ್ಲೆಯ ಕನ್ನಡಪರ ಹೋರಾಟಗಾರರು, ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕನ್ನಡ ಪ್ರೇಮ ಮೆರೆದರು. ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವ’, ನಿಸಾರ್‌ ಅಹಮ್ಮದ್‌ ಅವರ “ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖರವರ ಸಾಹಿತ್ಯ “ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡುವ ಮೂಲಕ ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮ ನಡೆಯಿತು.

ಇದೇ ಸಂದರ್ಭದಲ್ಲಿ ಕನ್ನಡಿಗರೆಲ್ಲರೂ ಒಟ್ಟಾಗಿ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ನಿತ್ಯ ವ್ಯವಹರಿಸುವ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌ ಅವರು ಬೋಧಿಸಿದರು. ಜಿಪಂ ಸಿಇಒ ಶಿಲ್ಪಾ ಶರ್ಮಾ, ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗುಂಡಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ, ಜಿಲ್ಲಾಮಟ್ಟದ ಜಾಗೃತಿ ಸಮಿತಿ ಸದಸ್ಯ ಶರಣು ಬಿ ಗದ್ದುಗೆ, ಭೀಮರಾಯ ಲಿಂಗೇರಿ, ಪ್ರಕಾಶ ಅಂಗಡಿ, ಆನಂದ ಮಧುಸೂದನ ಸೌದಿ, ಡಿಡಿಪಿಐ ಶಾಂತಗೌಡ ಪಾಟೀಲ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೊಟ್ರೇಶ್‌ ಮರಬನಳ್ಳಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next