ಬೆಂಗಳೂರು: ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್ ಗೋವಿ ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
Advertisement
“ಪಯಣ’, “ಸಂಚಾರಿ’, “ಪಾರು ವೈಫ್ ಆಫ್ ದೇವದಾಸ್’, “ಯಾರಿಗೆ ಯಾರುಂಟು’ ಸಿನಿಮಾಗಳನ್ನು ನಿರ್ದೇಶಿಸಿರುವ ಕಿರಣ್ ಗೋವಿ ಅವರು ಶನಿವಾರ ಕಚೇರಿಯಲ್ಲಿದ್ದ ವೇಳೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕಿರಣ್ ಗೋವಿ ನಿರ್ದೇಶನ ಮಾಡಿದ್ದ “ಪಯಣ’ ಚಿತ್ರ ದೊಡ್ಡ ಹಿಟ್ ಆಗಿತ್ತು. ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಸಂತಾಪ ಸೂಚಿಸಿದೆ.
ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಸುಂಟರಗಾಳಿ ಕನಿಷ್ಠ 23 ಮಂದಿ ಮೃತ್ಯು