Advertisement
ಕನ್ನಡ ಭಾಷೆಯನ್ನು ಶ್ರೀಮಂತ ಗೊಳಿಸುವುದರೊಂದಿಗೆ ನಮ್ಮದೇ ತುಳು, ಕೊಡವ, ಬ್ಯಾರಿ ಭಾಷೆಗಳ ಸಾಹಿತ್ಯ ಸಂಸ್ಕೃತಿಗಳ ಉತ್ತೇಜನಕ್ಕೂ ಮುಂದಾಗಬೇಕು. ಈ ಜಿಲ್ಲೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನೀಡಿರುವ ಕೊಡುಗೆ ಅನನ್ಯವಾದುದು. ಕನ್ನಡದ ಅನೇಕ ಶ್ರೇಷ್ಠ ಸಾಹಿತಿಗಳು, ಚಿಂತಕರು ಈ ನೆಲದವರು ಎಂಬುದು ನಮ್ಮೆಲ್ಲರ ಹೆಮ್ಮೆ ಎಂದರು.
ಮಂಗಳೂರು/ ಉಡುಪಿ: ಕರ್ನಾಟಕ ರಾಜ್ಯೋತ್ಸವದ ನಡುವೆಯೇ ಬೆಳ್ತಂಗಡಿಯ ಬಸ್‌ನಿಲ್ದಾಣ ಮತ್ತು ಉಡುಪಿಯ ಶಿರಿಬೀಡಿನಲ್ಲಿ ಅನ್ಯ ಧ್ವಜಗಳು ಹಾರಾಡಿದ ಘಟನೆ ವರದಿಯಾಗಿವೆ.
Related Articles
ನಗರದ ಅಂಬೇಡ್ಕರ್ ವೃತ್ತದಿಂದ ನೆಹರೂ ಮೈದಾನದವರೆಗೆ ತಾಯಿ ಭುವನೇಶ್ವರಿಯ ಮೆರವಣಿಗೆ ಹಲವು ಸ್ತಬ್ಧಚಿತ್ರಗಳ ಸಹಿತ ನಡೆಯಿತು. ಪಥಸಂಚಲನದಲ್ಲಿ ಎರಡು ಪೊಲೀಸ್ ಬ್ಯಾಂಡ್ ಸೇರಿದಂತೆ ಒಟ್ಟು 13 ತಂಡಗಳು ಭಾಗವಹಿಸಿದವು.
Advertisement
ಮುಂದಿನ ವರ್ಷ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಮನಪಾ ಚುನಾವಣೆ ಘೋಷಣೆ ಆಗಿರುವುದರಿಂದ ನಗರ ವ್ಯಾಪ್ತಿಯಲ್ಲಿ ನೀತಿಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಈ ಬಾರಿ ಆಯೋಜಿಸಿರಲಿಲ್ಲ. ಮುಂದಿನ ವರ್ಷ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಜತೆಯಾಗಿ ನೀಡಲಾಗುವುದು ಎಂದು ಸಚಿವರು ಹೇಳಿದರು.