Advertisement

ಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಬೇಡ..!

10:40 AM Dec 17, 2021 | Team Udayavani |

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಕನ್ನಡ ಭಾಷೆಯನ್ನು ಕಲಿಕಾ ವಿಷಯವನ್ನಾಗಿ ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ.

Advertisement

ಪದವಿ ಹಂತದಲ್ಲಿ ಕನ್ನಡ ಕಡ್ಡಾಯ ಕಲಿಕೆ ಮಾಡಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ ಹಾಗೂ ಕೆಲವು ವಿದ್ಯಾರ್ಥಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ಈ ಆದೇಶ ನೀಡಿದೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಆಧರಿಸಿ ಪದವಿ ಶಿಕ್ಷಣದ ಸಂದರ್ಭದಲ್ಲಿ ಕನ್ನಡ ಭಾಷೆ ವಿಷಯ ಕಲಿಕೆ ಕಡ್ಡಾಯಗೊಳಿಸಬಹುದೇ ಎಂಬ ಪ್ರಶ್ನೆಯನ್ನು ನ್ಯಾಯಾಲಯ ಪರಿಗಣಿಸಬೇಕಿದೆ. ಸದ್ಯ ಕನ್ನಡ ಕಲಿಕೆ ಕಡ್ಡಾಯ ವಿಚಾರದಲ್ಲಿ ನಿಲುವು ತಿಳಿಸುವಂತ ಹಂತದಲ್ಲಿ ತಾನು ಇಲ್ಲ. ನಿಲುವು ತಿಳಿಸಲು ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರ ಕೋರಿದೆ.

ಆದ್ದರಿಂದ ಈ ಹಂತದಲ್ಲಿ ರಾಜ್ಯ ಸರ್ಕಾರವು ಕನ್ನಡ ಕಲಿಕೆ ಭಾಷೆಯನ್ನು ಕಡ್ಡಾಯಗೊಳಿಸಬಾರದು. ತಮ್ಮ ಇಚ್ಛೆಯ ಅನುಸಾರ ಕನ್ನಡ ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಅಧ್ಯಯನ ಮುಂದುವರಿಸಬಹುದಾಗಿದೆ. ಕನ್ನಡವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳನ್ನು ಕನ್ನಡ ಅಧ್ಯಯನ ಮಾಡುವಂತೆ ನ್ಯಾಯಾಲಯದ ಮುಂದಿನ ಆದೇಶದವರೆಗೆ ಒತ್ತಾಯ ಮಾಡಬಾರದು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಕೇಂದ್ರ ಸರ್ಕಾರದ ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಂ.ಬಿ. ನರಗುಂದ್‌ ಹಾಜರಾಗಿ, ಎನ್‌ಇಪಿ ಜಾರಿಯನ್ನು ಮುಂದಿಟ್ಟುಕೊಂಡು ಯಾವುದೇ ರಾಜ್ಯದಲ್ಲಿ ಯಾವುದೇ ಭಾಷೆ ಕಡ್ಡಾಯಗೊಳಿಸುವುದು ಸಂಕೀರ್ಣ ಸಮಸ್ಯೆಗಳಿಗೆ ನಾಂದಿ ಹಾಡಲಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳಬೇಕಿದೆ.

Advertisement

ಇದನ್ನೂ ಓದಿ;- ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧ ಮರ ಕಳವು

ರಾಜ್ಯಗಳೊಂದಿಗೆ ಸಭೆ ನಡೆಸದ ಕಾರಣ ಕೇಂದ್ರ ಸರ್ಕಾರ ತನ್ನ ನಿಲುವು ತಿಳಿಸುವ ಸ್ಥಿತಿಯಲ್ಲಿಇಲ್ಲ.ಈ ವಿಚಾರವಾಗಿಪ್ರಮಾಣಪತ್ರ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು. ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, ಪ್ರಸಕ್ತ ಸಾಲಿನಲ್ಲಿ ರಾಜ್ಯದ 4 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.

ಪ್ರವೇಶ ಪ್ರಕ್ರಿಯೆ ಬಹುತೇಕ ಮುಗಿದಿದೆ. ಪ್ರವೇಶ ಪಡೆದವರು ಸಾಕಷ್ಟು ಜನ ಕನ್ನಡ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರಿಗೆ ಕನ್ನಡ ಕಡ್ಡಾಯ ಮಾಡಿರುವುದಕ್ಕೆ ಯಾವುದೇ ಸಮಸ್ಯೆಯಿಲ್ಲ. ಇನ್ನೂ ಸರ್ಕಾರದ ಆದೇಶ ಪ್ರಶ್ನಿಸಿರುವ ವಿದ್ಯಾರ್ಥಿಗಳೂ ಕನ್ನಡ ವಿಷಯ ಆಯ್ಕೆ ಮಾಡಿಕೊಂಡಿದ್ದಾರೆ. ಅವರು 12ನೇ ತರಗತಿವರೆಗೆ ಕನ್ನಡ ಕಲಿತಿದ್ದಾರೆ. ಹೀಗಾಗಿ, ಅವರ ಅರ್ಜಿ ವಿಚಾರಣೆಗೆ ಮಾನ್ಯತೆ ನೀಡಬೇಕಿಲ್ಲ ಎಂದು ತಿಳಿಸಿದರು. ವಿದ್ಯಾರ್ಥಿಗಳ ಪರ ವಕೀಲ ಶ್ರೀಧರ ಪ್ರಭು ವಾದ ಮಂಡಿಸಿ,ಕನ್ನಡಕಲಿಕೆಯಲು ಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆಯುವಂತೆ ಒತ್ತಾಯ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದುಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next