Advertisement

“ಕೋರ್ಟ್‌ ತೀರ್ಪು ಪ್ರಕಟವಾಗುವ ತನಕ ಕನ್ನಡ ಕಡ್ಡಾಯವಿಲ್ಲ’

12:29 AM Jan 24, 2022 | Team Udayavani |

ಬೆಂಗಳೂರು: ರಾಜ್ಯದ ಹೈಕೋರ್ಟ್‌ನ ಮಧ್ಯಾಂತರ ಆದೇಶದ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪದವಿ ಕಾಲೇಜಿನಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುವ ಉದ್ದೇಶದಿಂದ ಸರಕಾರ ಹಿಂದೆ ಸರಿದಿದೆ.

Advertisement

ಈ ಸಂಬಂಧ ಆದೇಶ ಹೊರಡಿಸಿರುವ ಉನ್ನತ ಶಿಕ್ಷಣ ಇಲಾಖೆಯು, ನ್ಯಾಯಾಲಯದ ಮಧ್ಯಾಂತರ ಆದೇಶ
ದನ್ವಯ ಕನ್ನಡವನ್ನು ಒಂದು ಭಾಷೆ ಯಾಗಿ ಕಲಿಯಲು ವಿದ್ಯಾರ್ಥಿಗಳು ಇಚ್ಛಿಸದಿದ್ದರೆ, ಅಂತಿಮ ಆದೇಶ ಪ್ರಕಟವಾಗುವ ತನಕ ಕನ್ನಡ ಕಡ್ಡಾಯ ಮಾಡಬಾರದು ಎಂದು ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು) ಅಧೀನ ಕಾರ್ಯದರ್ಶಿ ಮಹೇಶ್‌ ಆರ್‌. ಆದೇಶ ಹೊರಡಿಸಿದ್ದಾರೆ.

ದೇಶದಲ್ಲಿಯೇ ಮೊದಲ ಬಾರಿಗೆ ಉನ್ನತ ಶಿಕ್ಷಣ ಇಲಾಖೆಯು 2021-22ನೇ ಸಾಲಿನಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಉನ್ನತ ಶಿಕ್ಷಣದಲ್ಲಿ ಅನುಷ್ಠಾನ ಮಾಡಿದೆ. ಎನ್‌ಇಪಿ ಆಶಯದಂತೆ ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಎಲ್ಲ ಪದವಿ ಕಾಲೇಜುಗಳಲ್ಲಿ ಮೂರು ವರ್ಷಗಳ ಪದವಿಯಲ್ಲಿ ಎರಡು ವರ್ಷ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಬೇಕು ಎಂದು ಕಡ್ಡಾಯ ಮಾಡಿ ಆದೇಶ ಹೊರಡಿಸಿತ್ತು.

ಖಾಸಗಿ ವಿವಿಗಳ ವಿರೋಧ
ಸರಕಾರದ ಕ್ರಮಕ್ಕೆ ಕೆಲವು ಖಾಸಗಿ ಪದವಿ ಕಾಲೇಜುಗಳು, ಖಾಸಗಿ ವಿಶ್ವವಿದ್ಯಾಲಯಗಳು ವಿರೋಧ ವ್ಯಕ್ತಪಡಿ
ಸಿದ್ದವು. ಕನ್ನಡ ಕಡ್ಡಾಯ ಕಲಿಕೆ ಯಿಂದಾಗಿ ಪಿಯುಸಿ ಹಂತದಲ್ಲಿ ಕನ್ನಡ ಕಲಿಯದ ಹೊರ ರಾಜ್ಯ ಹಾಗೂ ಹೊರ ದೇಶದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಲಿದೆ. ಇದರಿಂದಾಗಿಹೊರ ರಾಜ್ಯದ ವಿದ್ಯಾರ್ಥಿಗಳು ರಾಜ್ಯದ ಕಾಲೇಜುಗಳಲ್ಲಿ ದಾಖಲಾ ಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದವು. ಜತೆಗೆ ನ್ಯಾಯಾಲಯದ ಮೊರೆ ಹೋಗಿದ್ದವು.ನ್ಯಾಯಾಲಯವು ಕನ್ನಡವನ್ನು ಬಲವಂತವಾಗಿ ಕಲಿಸಬಾರದು ಎನ್ನುವ ಮಧ್ಯಾಂತರ ತೀರ್ಪಿನ ಬೆನ್ನಲ್ಲೇ ಉನ್ನತ ಶಿಕ್ಷಣ ಇಲಾಖೆಯು ಕನ್ನಡ ಕಡ್ಡಾಯ ಕಲಿಕೆ ವಿಷಯವನ್ನು ಕೈಬಿಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next