ಶಿರ್ವ: ಕನ್ನಡವು ಕನ್ನಡಿಗರ ಆಸ್ಮಿತೆಯಾಗಿದ್ದು ಹೆಗ್ಗುರುತಾಗಿದೆ. ಕನ್ನಡವು ವ್ಯಾವಹಾರಿಕ ಭಾಷೆಯಾಗಿ ಬೆಳೆಯಬೇಕಿದ್ದು, ವೈಜ್ಞಾ ನಿಕ ಮತ್ತು ತಾರ್ಕಿಕ ತಳಹದಿಯಲ್ಲಿ ರೂಪುಗೊಂಡಿರುವ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಹೆತ್ತವರು ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಓದಿಸುವ ಮೂಲಕ ಸ್ವಾಭಿಮಾನಿಗಳಾಗಿ ಕನ್ನಡಾಭಿಮಾನ ಬೆಳೆಸಿಕೊಂಡು ಕನ್ನಡವನ್ನು ಅಮೃತ ಭಾಷೆಯಾಗಿ ಬೆಳಗಿಸಬೇಕಾಗಿದೆ ಎಂದು ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ಹೇಳಿದರು.
ಅವರು ಅ. 6ರಂದು ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಕಾಪು ತಾಲೂಕಿನ ಶಿರ್ವಪೇಟೆಗೆ ಆಗಮಿಸಿದ ಸಂದರ್ಭದಲ್ಲಿ ರಥಕ್ಕೆ ಕಾಯಿ ಒಡೆದು, ಕನ್ನಡ ತಾಯಿ ಭುವನೇಶ್ವರಿಗೆ ಮಾಲಾರ್ಪಣೆ ಮಾಡಿ ಆರತಿಬೆಳಗಿಸಿ ಸ್ವಾಗತ ಕೋರಿ ಮಾತನಾಡಿದರು.
ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ ಮಾತನಾಡಿ ಬಹುಭಾಷಾ ವೈವಿಧ್ಯತೆ ಹೊಂದಿರುವ ದೇಶದಲ್ಲಿ ಕನ್ನಡಭಾಷೆ, ನೆಲ, ಜಲ, ಸಂಸ್ಕೃತಿಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕನ್ನಡ ರಥಯಾತ್ರೆ ಹಂಪಿಯಲ್ಲಿ ಚಾಲನೆಗೊಂಡು ರಾಜ್ಯಾದ್ಯಂತ ಸಂಚರಿಸುತ್ತಿದೆ.ಪ್ರಾದೇಶಿಕ ಭಾಷೆಗಳೊಂದಿಗೆ ಕನ್ನಡವನ್ನು ವ್ಯಾವಹಾರಿಕ ಭಾಷೆಯಾಗಿ ಬಳಸಿ ಕನ್ನಡಾಭಿಮಾನವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಹೇಳಿದರು.
ಕನ್ನಡ ರಥದ ಮೂಲಕ ಕನ್ನಡಾಭಿಮಾನವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ನೇತೃತ್ವದಲ್ಲಿ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜು ತಂಗುದಾಣದ ಬಳಿ ಕನ್ನಡ ರಥವನ್ನು ಸ್ವಾಗತಿಸಿ ಮೆರವಣಿಗೆಯ ಮೂಲಕ ಶಿರ್ವ ಪೇಟೆಯವರೆಗೆ ಬರಲಾಯಿತು.
ಶಿರ್ವ ಗ್ರಾ.ಪಂ. ನೋಡಲ್ ಅಧಿಕಾರಿ/ಶಿರ್ವ ಪಶುವೈದ್ಯಾಧಿಕಾರಿ ಡಾ| ಅರುಣ್ ಕುಮಾರ್ ಹೆಗ್ಡೆ, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ರಾವ್,ಶಿರ್ವ ಪೊಲೀಸ್ ಠಾಣಾಧಿಕಾರಿ ಸಕ್ತಿವೇಲು .ಇ, ಕಾಪು ಕಂದಾಯ ಪರಿವೀಕ್ಷಕ ಇಜ್ಜಾರ್ ಶಬೀರ್, ಶಿರ್ವ ಗ್ರಾಮ ಆಡಳಿತಾಧಿಕಾರಿ ಶ್ವೇತಾ ಸುವರ್ಣ, ಕಾಪು ತಾ| ಕಂದಾಯ ಇಲಾಖೆಯ ಅರುಣ್ ಕುಮಾರ್, ಸಂಪ್ರೀತ್, ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಚರಣ್ ಜೋಗಿ, ಕಾಪು ತಾ|ಮಟ್ಟದ ಅಧಿಕಾರಿಗಳು, ದೇವದಾಸ್ ಹೆಬ್ಟಾರ್, ಶಿರ್ವ ಹಿಂದೂ ಪ.ಪೂ.ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ಸುಂದರ ಮೇರ,ಎನ್ನೆಸ್ಸೆಸ್ ವಿದ್ಯಾರ್ಥಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು,ಆರೋಗ್ಯ ಕೇಂದ್ರದ ಸಿಬಂದಿ,ಕಾಪು ತಾ| ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಪು ತಾ| ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಮರಾಠೆ ಸ್ವಾಗತಿಸಿದರು. ನೀಲಾನಂದ ನಾಯ್ಕ ನಿರೂಪಿಸಿ, ಸಂಘಟನಾ ಕಾರ್ಯದರ್ಶಿ ಕೆ.ಆರ್.ಪಾಟ್ಕರ್ ವಂದಿಸಿದರು.