Advertisement

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆಗೆ ಅನುಮೋದನೆ

10:23 PM Feb 23, 2023 | Team Udayavani |

ಬೆಂಗಳೂರು: ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲು ಸೌಲಭ್ಯ ನೀಡುವುದು ಸೇರಿದಂತೆ ಮಹತ್ವದ ಅಂಶ ಒಳಗೊಂಡ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆಗೆ ಅನುಮೋದನೆ ನೀಡಲಾಯಿತು.

Advertisement

ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ಕುಮಾರ್‌ ಮಸೂದೆ ಮಂಡಿಸಿ, ಖಾಸಗಿ ಕೈಗಾರಿಕೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ, ಉನ್ನತ, ತಾಂತ್ರಿಕ, ವೃತ್ತಿ ಶಿಕ್ಷಣದಲ್ಲಿ ಕನ್ನಡ ಒಂದು ಭಾಷೆ ಕಡ್ಡಾಯ ಹಾಗೂ ಅಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ಮೀಸಲಾತಿ ನೀಡುವುದು, ಅಧೀನ ನ್ಯಾಯಾಲಯಗಳಲ್ಲಿ ಮತ್ತು ನ್ಯಾಯಮಂಡಳಿಗಳಲ್ಲಿ ಕನ್ನಡ ಭಾಷೆ ಬಳಕೆ ಸೇರಿ ಮಸೂದೆಯ ಉದ್ದೇಶ ವಿವರಿಸಿದರು.

ಸಚಿವರ ಬದಲು ಮುಖ್ಯಮಂತ್ರಿಯವರ ನೇತೃತ್ವದಲ್ಲೇ ಮೇಲ್ವಿಚಾರಣ ಸಮಿತಿ ಇರಬೇಕು ಎಂದು ವಿಪಕ್ಷ ಸದಸ್ಯರು ಆಗ್ರಹಿಸಿದರು.

ಅಂತಿಮವಾಗಿ ಮೇಲ್ವಿಚಾರಣ ಸಮಿತಿಗೆ ಕನ್ನಡ ಸಾಹಿತ್ಯ ಪರಿಷತ್‌ ಪ್ರತಿನಿಧಿ ಸೇರ್ಪಡೆ ಮಾಡುವುದು ಸೇರಿದಂತೆ ಕೆಲವು ಅಂಶಗಳ ತಿದ್ದುಪಡಿಯೊಂದಿಗೆ ಮಸೂದೆಗೆ ಅನುಮೋದನೆ ಪಡೆಯಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next