Advertisement

ಕನ್ನಡ ಭಾಷಾಭಿವೃದ್ಧಿಗೆ ಕೇಂದ್ರಕ್ಕೆ ಮನವಿ

10:39 AM Dec 23, 2021 | Team Udayavani |

 

Advertisement

ಬೆಂಗಳೂರು: ಶಿಕ್ಷಣ, ಉದ್ಯೋಗ ಹಾಗೂ ಭಾಷೆಯ ಅಭಿವೃದ್ಧಿಗೆ ಸೇರಿದಂತೆ ಕನ್ನಡದ ಕುರಿತ ಹಲವು ವಿಚಾರಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಸ್ಥಳೀಯ ಭಾಷೆಯ ಅನುಷ್ಠಾನ ಹಾಗೂ ಶಾಸ್ತ್ರೀಯ ಭಾಷೆಗೆ ಸಂಬಂಧಿಸಿದ ವಿಷಯಗಳನ್ನು ಮಾನವ ಸಂಪನ್ಮೂಲ ಇಲಾಖೆಗೆ ಜತೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕನ್ನಡ ಬಾರದ ಅಧಿಕಾರಿಗಳಿಂದ ಕರ್ನಾಟಕದ ಗ್ರಾಹಕರು ಬಹುದೊಡ್ಡ ಮಟ್ಟದಲ್ಲಿ ಸಮಸ್ಯೆಗಳನ್ನು ಎದುರಿಸಿದ್ದಾರೆ. ಗ್ರಾಹಕನಿಗೆ ಅವನದ್ದೇ ಭಾಷೆಯಲ್ಲಿ ಸೇವೆ ಒದಗಿಸುವುದು ಮುಖ್ಯವೆಂದು ಅರಿತುಕೊಂಡ ಕೇಂದ್ರ ಸರ್ಕಾರ ಗ್ರೂಪ್‌ ಸಿ ಮತ್ತು ಡಿ ಮತ್ತು ಗ್ರಾಮೀಣ ಬ್ಯಾಂಕ್‌ಗಳಿಗೆ ಕನ್ನಡದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಗ್ರೂಪ್‌ ಎ ಮತ್ತು ಬಿ ಹುದ್ದೆಗಳಿಗೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂಬುದು ಮನವಿ ಮಾಡಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ; ಬಿಲ್ ಹರಿದು ಹಾಕಿದ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಯಡಿಯೂರಪ್ಪ ಒತ್ತಾಯ

ಎರಡು ದಿನದ ಈ ಭೇಟಿಯ ವೇಳೆ ಪ್ರಾಧಿಕಾರದ ನಿಯೋಗ ಕೇಂದ್ರ ಸಚಿವ ಡಾ.ಜಿತೇಂದ್ರಸಿಂಗ್‌, ಕಿಶನ್‌ ರೆಡ್ಡಿ, ಅನುರಾಂಗ್‌ ಸಿಂಗ್‌ ಠಾಕೂರ್‌, ಮಾಜಿ ಪ್ರಧಾನಿ ಮತ್ತು ಸಂಸದರಾದ್ದ ಎಚ್‌.ಡಿ. ದೇವೇಗೌಡ ಸೇರಿದಂತೆ ಹಲವು ಕೇಂದ್ರದ ನಾಯಕರನ್ನು ಭೇಟಿ ಮಾಡಿ ಕರ್ನಾಟಕದ ಸಮಸ್ಯೆಗಳ ಮನವರಿಕೆ ಮಾಡಿಕೊಟ್ಟಿದೆ ಎಂದರು. ಭೇಟಿ ವೇಳೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಪ್ರೊ. ಮಲ್ಲೇಪುರಂ ಜಿ.ವೆಂಕಟೇಶ್‌ ಇದ್ದರು.

ಪ್ರಾದೇಶಿಕ ಭಾಷೆಗಳ ಅಭಿವೃದ್ಧಿಗೆ ಕೇಂದ್ರದ ಆದ್ಯತೆ

Advertisement

ಬೆಂಗಳೂರು: ಪ್ರಾದೇಶಿಕ ಭಾಷೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ದೆಹಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ನೇತೃತ್ವದ ನಿಯೋಗದ ಭೇಟಿ ವೇಳೆ ಕನ್ನಡ ಭಾಷೆಯ ಅಭಿವೃದ್ದಿಗೆ ಸಂಬಂಧಿಸಿದ ಮನವಿ ಪತ್ರ ಸ್ವೀಕರಿಸಿ ಅವರು ಮಾತನಾಡಿದರು.

ಕನ್ನಡ ಭಾಷೆಯ ಅಭಿವೃ ದ್ಧಿಗೆ, ಕನ್ನಡಿ ಗರ ಔದ್ಯೋಗಿಕ ಬೇಡಿಕೆಗಳಿಗೆ ಹಾಗೂ ಕರ್ನಾಟಕದ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ನಿರ್ಮಲ ಭೇಟಿ: ಇದೇ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಾಣ ಸೀತಾರಾಮನ್‌ರನ್ನು ಭೇಟಿ ಮಾಡಿದ ನಿಯೋಗ ಗ್ರಾಮೀಣ ಬ್ಯಾಂಕಿಂಗ್‌ ನೇಮಕಾತಿಯ ಪೂರ್ವಭಾವಿ, ಮುಖ್ಯ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವಂತೆ ಕ್ರಮವಹಿಸಿದಕ್ಕೆ ಅಭಿನಂದನೆ ಸಲ್ಲಿಸಿತು.

Advertisement

Udayavani is now on Telegram. Click here to join our channel and stay updated with the latest news.

Next