ಬೆಳ್ತಂಗಡಿ: ಉಜಿರೆಯಲ್ಲಿ ಫೆ.3 ರಿಂದ 5 ರತನಕ ನಡೆಯುವ ದಕ ಜಿಲ್ಲೆಯ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜ.22 ರಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಸಮ್ಮೇಳನ ಅಧ್ಯಕ್ಷರಾಗಿರುವ ಡಾ. ಹೇಮಾವತಿ ವೀ. ಹೆಗ್ಗಡೆಯವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು.
ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್, ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಕೇಶವ ಭಟ್ ಅತ್ತಾಜೆ, ಸಮ್ಮೇಳನ ಸಮಿತಿಯ ಕಾರ್ಯದರ್ಶಿ ರಮೇಶ ಮಯ್ಯ, ಹರ್ಷಕುಮಾರ್, ಕಲಾವತಿ, ಅಭಾಸಾಪ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ, ರಾಮಕೃಷ್ಣ ಭಟ್ ಬಳಂಜ,ಹರೀಶ್ ರಾವ್ ಮುಂಡ್ರುಪಾಡಿ ಉಪಸ್ಥಿತರಿದ್ದರು.