Advertisement
ವಾಣಿಜ್ಯ, ವ್ಯವಹಾರ ನಡೆಸುವ ಅಂಗಡಿಗಳ ಎದುರಿನ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯವಾಗಿ ಇರಬೇಕೆಂಬ ರಾಜ್ಯ ಸರಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಮುಂಬಯಿ ಯಲ್ಲಿ ಕೇಂದ್ರ ಕಚೇರಿ ಹೊಂದಿರುವ ರೀಟೇಲರ್ಸ್ ಅಸೋಸಿ ಯೇಶನ್ ಆಫ್ ಇಂಡಿಯಾ ಸಹಿತ 24 ಪ್ರತಿಷ್ಠಿತ ಖಾಸಗಿ ವಾಣಿಜ್ಯ ಸಂಸ್ಥೆಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಹೇಮಂತ ಚಂದನ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೌಖೀಕವಾಗಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
Related Articles
Advertisement
ಮಧ್ಯಾಂತರ ಆದೇಶದಲ್ಲೇನಿತ್ತು?ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಕೂಡ ಕರ್ನಾಟಕದಲ್ಲಿ ವಾಣಿಜ್ಯ ವಹಿವಾಟು ನಡೆಸುವ ಸಂಸ್ಥೆಗಳು ಕನ್ನಡ ಭಾಷೆಯನ್ನು ಪಾಲಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿತ್ತು. ಆದರೆ ಸೂಚನಾ ಫಲಕಗಳಲ್ಲಿ ಶೇ. 60ರಷ್ಟು ಕನ್ನಡವಿಲ್ಲದ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಿಸುವುದು ಸರಿಯಲ್ಲ. ಮೇಲ್ನೋಟಕ್ಕೆ ಇದನ್ನು ಒಪ್ಪಲಾಗದು, ಸಂಸ್ಥೆಗಳಿಗೆ ಸ್ವಲ್ಪ ಕಾಲಾವಕಾಶ ನೀಡಬೇಕಾಗುತ್ತದೆ ಎಂದು ಹೇಳಿತ್ತು. ಅಲ್ಲದೆ ಸದ್ಯಕ್ಕೆ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಮಾ. 18ರಂದು ಮಧ್ಯಾಂತರ ಆದೇಶ ನೀಡಿತ್ತು.