Advertisement
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಿದ ಅವರು, 1ರಿಂದ 10ನೇ ತರಗತಿ ವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರಕಾರದ ಪ್ರೋತ್ಸಾಹ ಅಗತ್ಯವಾಗಿದೆ. ಉನ್ನತ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಸರಕಾರವೇ ತೆಗೆದುಕೊಳ್ಳಬೇಕು. ಉತ್ತಮ ರ್‍ಯಾಂಕ್‌ನೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಇನ್ನಷ್ಟು ಸಾಧನೆ ಮಾಡುವುದಕ್ಕೆ ಇದರಿಂದ ಅವಕಾಶವಾಗುತ್ತದೆ ಎಂದರು.
ಪ್ರದೀಪ್ ಈಶ್ವರ್ ಭಾಷಣ ಪ್ರಾರಂಭಿಸುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಸ್ಪೀಕರ್ ಯು.ಟಿ.ಖಾದರ್, ನೀವು ವಿಧಾನಸಭೆಯಲ್ಲಿ ಅತ್ಯಂತ ಆತ್ಮವಿಶ್ವಾಸದಿಂದ ಮಾತನಾಡಿ. ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಬಹುದೆಂಬ ಭಯ ಬೇಡ. ನಾವೆಲ್ಲರೂ ಟ್ರೋಲ್ ಆಗಿಯೇ ಈ ಸ್ಥಾನಕ್ಕೆ ಬಂದಿದ್ದೇವೆ. ನೀವು ಧೈರ್ಯದಿಂದ ಮಾತನಾಡಿ ಎಂದು ಸಲಹೆ ನೀಡಿದರು. ಕೆಲವು ದಿನಗಳ ಹಿಂದೆ ಪ್ರದೀಪ್ ಈಶ್ವರ್ ಭಾಷಣ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್‌ಗೆ ಒಳಗಾಗಿತ್ತು. “ಯೇ ಪ್ರದೀಪ್, ಸಾವು ಆಗಿಲ್ಲ ಮಾರಾಯ ಕೂತ್ಕೊ” ಎಂದು ಸ್ಪೀಕರ್ ಖಾದರ್ ಕೋಪಗೊಂಡಿದ್ದೂ ಸುದ್ದಿಯಾಗಿತ್ತು.