Advertisement

Ghost: ಶೂಟಿಂಗ್ ಮುಗಿಸಿದ ‘ಘೋಸ್ಟ್’

03:42 PM Aug 15, 2023 | Team Udayavani |

ಸಂದೇಶ್‌ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸಂದೇಶ್‌ ನಾಗರಾಜ್‌ ಅವರು ಅರ್ಪಿಸುವ, ಸಂದೇಶ್‌ ಎನ್‌ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್‌ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್‌ ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

Advertisement

ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯವಾಗಿದ್ದು, ಕುಂಬಳಕಾಯಿ ಒಡೆಯಲಾಗಿದೆ. ಚಿತ್ರದ ಇನ್ನೊಂದು ವಿಶೇಷವೆಂದರೆ ನಿರ್ದೇಶಕ ಶ್ರೀನಿ ಬೀರ್‌ಬಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಕೂಡ ಶ್ರೀನಿ ಬೀರ್‌ಬಲ್ ಚಿತ್ರದಲ್ಲಿ ಅಭಿನಯಿಸಿದ್ದರು. ಈಗ ಈ ಚಿತ್ರದಲ್ಲಿ ಬೀರ್‌ ಬಲ್ ಪಾತ್ರದಲ್ಲಿ ಅಭಿನಯಿಸಿರುವುದು, ಬೀರ್‌ಬಲ್‌ ಭಾಗ 2 ಬರಬಹುದಾ? ಎಂಬ ಪ್ರಶ್ನೆ ಮೂಡಿದೆ.

ಶಿವರಾಜಕುಮಾರ್‌, ಅನುಪಮ್‌ ಖೇರ್‌, ಜಯರಾಂ, ಸತ್ಯಪ್ರಕಾಶ್‌, ಪ್ರಶಾಂತ್‌ ನಾರಾಯಣನ್‌, ದತ್ತಣ್ಣ, ಅಭಿಜಿತ್‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next