Advertisement

Gumti: ಕರಾವಳಿ ಸೊಗಡಿನ ಸಿನಿಮಾ ʼಗುಂಮ್ಟಿʼ ಟ್ರೇಲರ್‌ ಬಂತು

01:29 PM Nov 11, 2024 | Team Udayavani |

ಕರ್ನಾಟಕದ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯನ್ನು ಮೂಲವಾಗಿಟ್ಟುಕೊಂಡು ಬರುತ್ತಿರುವ ಸಿನಿಮಾ “ಗುಂಮ್ಟಿ’. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಆಗಿದೆ.

Advertisement

“ಗುಂಮ್ಟಿ’ ಸಿನೆಮಾದ ಬಗ್ಗೆ ಮಾತನಾಡಿದ ನಿರ್ಮಾಪಕ ವಿಕಾಸ್‌ ಎಸ್‌. ಶೆಟ್ಟಿ, ಬಾಲ್ಯದಿಂದಲೂ ನಮ್ಮ ಸುತ್ತಮುತ್ತ ಕಂಡ ಜಾನಪದ ಕಲೆಯೊಂದನ್ನು ಈ ಸಿನಿಮಾದಲ್ಲಿ ತೆರೆಗೆ ತರುವ ಪ್ರಯತ್ನ ಮಾಡಿದ್ದೇವೆ. ನೈಜತೆಯಿಂದ ಸಿನೆಮಾ ಮೂಡಿಬಂದಿದ್ದು, ಎಲ್ಲರಿಗೂ ಈ ಸಿನೆಮಾದ ಕಥಾಹಂದರ ಇಷ್ಟವಾಗಲಿದೆ. “ಗುಂಮಿr’ ನೋಡುಗರ ಮನಮುಟ್ಟುತ್ತದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, “ಗುಂಮ್ಟಿ’ ಸಿನೆಮಾಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌-ಕಟ್‌ ಹೇಳಿದ್ದು, ಜೊತೆಗೆ ತೆರೆಮೇಲೆ ನಾಯಕ ನಟನಾಗಿಯೂ ಕಾಣಿಸಿಕೊಂಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಸಂದೇಶ್‌ ಶೆಟ್ಟಿ ಆಜ್ರಿ, “ಇದೊಂದು ಕಲಾತ್ಮಕ ಸಿನೆಮಾವಾಗಿದ್ದು, ಕರ್ನಾಟಕದ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯನ್ನು ತೆರೆಮೇಲೆ ಹೇಳಲು ಹೊರಟಿದ್ದೇವೆ. “ಗುಂಮ್ಟಿ’ ಎಂಬುದು ಕುಡುಬಿ ಸಮುದಾಯಕ ಕಲಾಪ್ರಾಕಾರದ ಸಾಂಪ್ರದಾಯಿಕ ವಾದ್ಯವಾಗಿದ್ದು, ಅದನ್ನೇ ಸಿನೆಮಾದ ಟೈಟಲ್‌ ಆಗಿ ಇಟ್ಟುಕೊಂಡಿದ್ದೇವೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷ ಗುಂಮ್ಟಿ’ ಸಿನಿಮಾದಲ್ಲಿ ಅನಾವರಣವಾಗಲಿದೆ’ ಎಂದು ಶೀರ್ಷಿಕೆ ಮತ್ತು ಕಥಾಹಂದರದ ಬಗ್ಗೆ ವಿವರಣೆ ನೀಡಿದರು.

ಈಗಾಗಲೇ ಸಿನೆಮಾ ಬಿಡುಗಡೆಗೂ ಮೊದಲೇ ಎಲ್ಲ ಕಡೆಗಳಿಂದ “ಗುಂಮ್ಟಿ’ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಸುತ್ತಮುತ್ತ ಸುಮಾರು 24 ಕ್ಕೂ ಹೆಚ್ಚು ಪ್ರದರ್ಶನಗಳು ಮುಂಗಡವಾಗಿ ಬುಕ್ಕಿಂಗ್‌ ಆಗಿದೆ ಎಂಬ ಮಾಹಿತಿಯನ್ನು ಚಿತ್ರತಂಡ ಇದೇ ವೇಳೆ ಹಂಚಿಕೊಂಡಿತು.

Advertisement

“ಗುಂಮ್ಟಿ’ ಸಿನೆಮಾದಲ್ಲಿ ವೈಷ್ಣವಿ ನಾಡಿಗ್‌ ನಾಯಕಿಯಾಗಿ ಮಲ್ಲಿ ಎಂಬ ಹೆಸರಿನ ಕುಡುಬಿ ಸಮುದಾಯದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಜನ್‌ ಛತ್ರಪತಿ, ಕರಣ್‌ ಕುಂದರ್‌, ಯಶ್‌ ಆಚಾರ್ಯ, ಪ್ರಭಾಕರ ಕುಂದರ್‌, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ ಸೇರಿದಂತೆ ಅನೇಕರು ನಟಿಸಿದ್ದಾರೆ.

ಚಿತ್ರವನ್ನು ಉಡುಪಿ, ಕುಂದಾಪುರ, ಕಾರವಾರ, ಶಿರಸಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಹಾರಾಷ್ಟ್ರದ ಸೋಲಾಪುರ ಹೀಗೆ ಕರಾವಳಿ-ಮಲೆನಾಡು ಮತ್ತು ಪಶ್ಚಿಮ ಘಟ್ಟದ ಸುತ್ತಮುತ್ತ ಸುಮಾರು 30ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next