Advertisement

ನ.18ಕ್ಕೆ ರಿಲೀಸ್ ಆಗಲಿದೆ “ಹೊಂದಿಸಿ ಬರೆಯಿರಿ”

01:37 PM Sep 25, 2022 | Team Udayavani |

ಹೊಸಬರ “ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ನವೆಂಬರ್‌ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಬಹು ದೊಡ್ಡ ಹಾಗೂ ಕಲರ್ ಫ‌ುಲ್‌ ತಾರಾಗಣ ಚಿತ್ರದಲ್ಲಿದ್ದು, ಪ್ರವೀಣ್‌ ತೇಜ್‌, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀಮಹಾದೇವ್‌, ಭಾವನಾ ರಾವ್‌, ನವೀನ್‌ ಶಂಕರ್‌, ಅರ್ಚನಾ ಜೋಯಿಸ್‌ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

Advertisement

ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಎಳೆಯನ್ನು ಮೂಲವಾಗಿಟ್ಟುಕೊಂಡು ಅದರ ಸುತ್ತ ಹೆಣೆಯಲಾದ ಕಥಾಹಂದರವೇ “ಹೊಂದಿಸಿ ಬರೆಯಿರಿ’ ಸಿನಿಮಾ. ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಜರ್ನಿಯೂ ಇದೆ.

ಚಿತ್ರದಲ್ಲಿ ಎಂಟು ಹಾಡುಗಳಿದ್ದು ಈಗಾಗಲೇ ಒಂದು ಸಾಂಗ್‌ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್‌ನಲ್ಲಿ ಟ್ರೇಲರ್‌ ರಿಲೀಸ್‌ ಮಾಡಲು ಚಿತ್ರತಂಡ ಪ್ಲ್ರಾನ್‌ ಮಾಡಿಕೊಂಡಿದೆ.

ಇದನ್ನೂ ಓದಿ:ಅತಿಯಾದ ಸ್ಲೆಡ್ಜಿಂಗ್; ಯಶಸ್ವಿ ಜೈಸ್ವಾಲ್’ರನ್ನು ಮೈದಾನದಿಂದ ಹೊರಗೆ ಕಳುಹಿಸಿದ ರಹಾನೆ| VIDEO

ನಿರ್ದೇಶಕ ಜಗನ್ನಾಥ್‌ ಗಿದು ಮೊದಲ ಸಿನಿಮಾ. ರಾಕ್‌ ಲೈನ್‌ ಪ್ರೊಡಕ್ಷನ್‌ ನಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ತಾವೇ ಮಾಡಿದ್ದಾರೆ.

Advertisement

ಕೆ. ಕಲ್ಯಾಣ್‌, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್‌ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪ್ರಶಾಂತ್‌ ರಾಜಪ್ಪ ಹಾಗೂ ನಿರ್ದೇಶಕ ಜಗನ್ನಾಥ್‌ ಮೂವರ ಸಂಭಾಷಣೆ ಚಿತ್ರಕ್ಕಿದೆ. ಸಂಡೇ ಸಿನಿಮಾಸ್‌ ಬ್ಯಾನರ್‌ನಡಿ ರಾಮೇನಹಳ್ಳಿ ಜಗನ್ನಾಥ್‌ ಹಾಗೂ ಸ್ನೇಹಿತರು ಸೇರಿ ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಸುನೀಲ್‌ ಪುರಾಣಿಕ್‌, ಪ್ರವೀಣ್‌ ಡಿ ರಾವ್‌, ಧರ್ಮೇಂದ್ರ ಅರಸ್‌, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next