ಕನ್ನಡ ಚಿತ್ರರಂಗದ ಸದಭಿರುಚಿ ಚಿತ್ರ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಸಿನಿಮಾ “ಕಸ್ತೂರಿ ಮಹಲ್’ ತನ್ನೆಲ್ಲ ಕೆಲಸಗಳನ್ನು ಮುಗಿಸಿ ಈಗ ಬಿಡುಗಡೆ ಹಂತಕ್ಕೆ ಬಂದಿದೆ. ಈಗಾಗಲೇ ಬಿಡುಗಡೆಯಾಗಿರುವ “ಕಸ್ತೂರಿ ಮಹಲ್’ ಚಿತ್ರದ ಪೋಸ್ಟರ್, ಟೀಸರ್ ಮತ್ತು ಲಿರಿಕಲ್ ವಿಡಿಯೋ ಹಾಡುಗಳಿಗೆ ಸೋಶಿಯಲ್ ಮೀಡಿಯಾಗಳಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೇ ಖುಷಿಯಲ್ಲಿರುವ ಚಿತ್ರತಂಡ, ಇದೇ ಮೇ. 13ರಂದು “ಕಸ್ತೂರಿ ಮಹಲ್’ ಅನ್ನು ಥಿಯೇಟರ್‌ಗೆ ತರುವ ಯೋಜನೆ ಹಾಕಿಕೊಂಡಿದೆ.
ಇನ್ನು ಹಾರರ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಸ್ತೂರಿ ಮಹಲ್’ ಚಿತ್ರದಲ್ಲಿ ಬಹುಭಾಷ ನಟಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
“ಚಂದ್ರಲೇಖಾ’ ಸಿನಿಮಾದ ನಂತರ ಶಾನ್ವಿ ಮತ್ತೂಮ್ಮೆ ಈ ಥರದ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದರ ಬಗ್ಗೆ ಸಾಕಷ್ಟು ಎಕ್ಸೆ„ಟ್ ಆಗಿದ್ದಾರೆ. “ಕನ್ನಡದಲ್ಲಿ ಸಾಕಷ್ಟು ಹಾರಾರ್ ಸಿನಿಮಾಗಳು ಬಂದಿವೆಯಾದರೂ, “ಕಸ್ತೂರಿ ಮಹಲ್’ ಅದೆಲ್ಲದಕ್ಕಿಂತಲೂ ಸಂಪೂರ್ಣ ವಿಭಿನ್ನ ಸಿನಿಮಾ. ಸುಮಾರು ಮೂರು ವರ್ಷದ ನಂತರ ನನ್ನ ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇಲ್ಲಿಯ ವರೆಗೆ ನಾನು ಮಾಡಿದ ಸಿನಿಮಾಗಳಿಗಿಂತ ಬೇರೆ ಥರದ ಪಾತ್ರ ಈ ಸಿನಿಮಾದಲ್ಲಿದೆ. ನನಗೆ ಅತ್ಯಂತ ಖುಷಿ ಕೊಟ್ಟ ಪಾತ್ರ ಆಡಿಯನ್ಸ್‌ಗೂ ಇಷ್ಟವಾಗಲಿದೆ’ ಎಂಬ ವಿಶ್ವಾಸದ ಮಾತುಗಳು ಶಾನ್ವಿ ಅವರದ್ದು.
ಇದನ್ನೂ ಓದಿ:ನಟ ದಿಲೀಪ್ ವಿರುದ್ಧದ ತನಿಖಾಧಿಕಾರಿ ಹತ್ಯೆ ಸಂಚು ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ
“ಕಸ್ತೂರಿ ಮಹಲ್’ನಲ್ಲಿ ಶಾನ್ವಿ ಶ್ರೀವಾತ್ಸವ್ ಅವರೊಂದಿಗೆ ಸ್ಕಂದ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ವತ್ಸಲಾ ಮೋಹನ್, ಕಾಶಿಮಾ, ನೀನಾಸಂ ಅಶ್ವಥ್ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇನ್ನೊಂದು ವಿಶೇಷವೆಂದರೆ, “ಕಸ್ತೂರಿ ಮಹಲ್’ ಸಿನಿಮಾದ ಬಹುಭಾಗ ಚಿತ್ರೀಕರಣವನ್ನು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಸುಮಾರು 200 ವರ್ಷ ಹಳೆಯ ಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರದ ಕಥಾಹಂದರಕ್ಕೆ ಸೂಕ್ತವಾದ ಈ ಲೊಕೇಶನ್‌ಗಾಗಿ ಚಿತ್ರತಂಡ ಸಾಕಷ್ಟು ಹುಡುಕಾಟ ನಡೆಸಿತ್ತು.