Advertisement

‘ಬಿಗ್ ಬಾಸ್ ಮನೆಗೆ ಎಂಟ್ರಿ’ …ನಿರ್ದೇಶಕ ರವಿ ಶ್ರೀವತ್ಸ ಹೇಳಿದ್ದೇನು ?

01:33 PM Feb 24, 2021 | Team Udayavani |

ಬೆಂಗಳೂರು : ಖ್ಯಾತ ಸಿನಿಮಾ ನಿರ್ದೇಶಕ ರವಿ ಶ್ರೀವತ್ಸ ಈ ಬಾರಿ ಕನ್ನಡದ ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಬರಲಿದ್ದಾರೆ ಎನ್ನುವ ವದಂತಿ ಕೇಳಿ ಬಂದಿತ್ತು. ಆದರೆ, ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ.

Advertisement

ತಮ್ಮ ಕುರಿತು ಹರಿದಾಡುತ್ತಿದ್ದ ವದಂತಿಗೆ ಬ್ರೇಕ್ ಹಾಕಿರುವ ಶ್ರೀವತ್ಸ, ನಾನು ಬಿಗ್ ಬಾಸ್ ಮನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ಫೇಕ್ ನ್ಯೂಸ್ ಗೆ ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡದ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಹೊಸ ಸೀಸನ್ ಪ್ರಾರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಇದೇ ಫೆ.28 ರಿಂದ ಪ್ರತಿ ದಿನ ಸಂಜೆ 6 ಗಂಟೆಗೆ ಸುದೀಪ್ ನಿರೂಪಣೆಯಲ್ಲಿ “ಬಿಗ್ ಬಾಸ್ ಸೀಸನ್ 8” ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

ಇದನ್ನೂ ಓದಿ :  ಶ್ರೀದೇವಿ ಪುಣ್ಯಸ್ಮರಣೆ : ಬೊಗಸೆ ಕಂಗಳ ನಟಿ ಅಭಿಮಾನಿಗಳಿಗೆ ಆಘಾತ ನೀಡಿದ ದಿನವಿದು..!

ಶೋ ಶುರುವಾಗುವುದಕ್ಕೆ ಇನ್ನೂ ನಾಲ್ಕೇ ದಿನ ಬಾಕಿ ಇರುವಾಗಲೇ ಈ ಬಾರಿ ಬಿಗ್  ಬಾಸ್ ಮನೆಗೆ ಎಂಟ್ರಿ ಕೊಡಲಿರುವ ಸ್ಪರ್ಧಿಗಳು ಯಾರು ಎನ್ನುವ ಕುತೂಹಲ ಮೂಡಿದೆ. ಈಗಾಗಲೇ ಕೆಲವು ಹೆಸರುಗಳು ಕೇಳಿ ಬಂದಿವೆ. ಆದರೆ, ಬಿಗ್ ಬಾಸ್  ಮನೆಗೆ ರಿಯಲ್ ಸ್ಪರ್ಧಿಗಳು ಯಾರು ಎಂಬುದು ಶೋ ಪ್ರಾರಂಭದ ದಿನವೇ ಬಹಿರಂಗವಾಗಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next