Advertisement

ನ. 1ರಿಂದ ಕನ್ನಡ ನಾಮಫ‌ಲಕ ಕಡ್ಡಾಯ

10:11 AM Oct 26, 2019 | Suhan S |

ಬೆಂಗಳೂರು: ನವೆಂಬರ್‌ 1ರಿಂದ ನಗರದ ಎಲ್ಲ ಅಂಗಡಿ ಮುಂಗಟ್ಟುಗಳು, ಹೋಟೆಲ್‌ಗ‌ಳು ಹಾಗೂ ಖಾಸಗಿ ಕಂಪನಿಗಳು ಕನ್ನಡ ನಾಮಫಲಕ ಅಳಡಿಕೆ ಮಾಡುವುದು ಕಡ್ಡಾಯ ಎಂದು ಪಾಲಿಕೆ ಆಯುಕ್ತ ಬಿಬಿಎಂಪಿ ಆಯುಕ್ತ ಅನಿಲ್‌ ಕುಮಾರ್‌ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಕನ್ನಡ ಭಾಷೆಗೆ ನಾಮಫ‌ಲಕಗಳಲ್ಲಿ ಅಗ್ರಸ್ಥಾನ ನೀಡದಿದ್ದರೆ ಅಂತಹ ಮಳಿಗೆಗಳ ವಾಣಿಜ್ಯ ಪರವಾನಗಿಯನ್ನು ರದ್ದುಗೊಳಿಸ ಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.

Advertisement

ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಮಾಡಬೇಕು. ಫಲಕಗಳಲ್ಲಿ ಕನ್ನಡ ಪದಗಳು ಸ್ಪಷ್ಟವಾಗಿ ಕಾಣುವಂತೆ ಮುದ್ರಿಸಬೇಕು ಎಂದು ಆಯುಕ್ತರು ಸ್ಪಷ್ಟ ಸೂಚನೆ ನೀಡಿದ್ದಾರೆ. ಜತೆಗೆ ಹೊಸದಾಗಿ ಪರವಾನಗಿ ಅರ್ಜಿ ಸಲ್ಲಿಸುವಂತಹ ಅರ್ಜಿದಾರರಿಗೂ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳು ಸೂಚನೆ

ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಕೆಲವು ಕನ್ನಡಪರ ಸಂಘಟನೆಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಮೇಯರ್‌ ಸೇರಿದಂತೆ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದವು.  ಮೇಯರ್‌ ಗೌತಮ್‌ ಕುಮಾರ್‌ ಅವರು ಅಧಿಕಾರ ವಹಿಸಿಕೊಂಡ ನಂತರ ನ.1ರಿಂದ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡ ಲಾಗುವುದು ಎಂದು ಘೋಷಿಸಿದ್ದರು. ಮೇಯರ್‌ ಅವರ ಘೋಷಣೆ ಬೆನ್ನಲ್ಲೇ ಆಯುಕ್ತ ಅನಿಲ್‌ ಕುಮಾರ್‌ ಅವರು ನ.1ರಿಂದ ಕನ್ನಡ ಭಾಷೆ ಕಡ್ಡಾಯಕ್ಕೆ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next