ಮಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು ಫೆ.8ರಿಂದ 12ರ ವರೆಗೆ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ಆವರಣದಲ್ಲಿ ಏರ್ಪಡಿಸಲಾಗುವುದು. ಮೇಳದಲ್ಲಿ ಭಾಗವಹಿಸುವ ಕನ್ನಡ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ 2,000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರ ಹೆಸರಲ್ಲಿ ಡಿಡಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ಸೈಟ್ www.kannadapustakapradhikara.com ನಲ್ಲಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಜ. 31ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಇವರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ಮೂಲಕ
ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 080-22484516.