ಹಗರಿಬೊಮ್ಮನಹಳ್ಳಿ: ಕನ್ನಡ ಭಾಷೆ ಅನ್ನ ನೀಡುವ ಭಾಷೆ. ಮಾತನಾಡಲು ಸುಲಲಿತ ಎಂದು ಶಾಸಕ ಎಸ್. ಭೀಮಾನಾಯ್ಕ ಹೇಳಿದರು.
ಪಟ್ಟಣದ ನೀರಾವರಿ ಇಲಾಖೆ ಆವರಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜ ಸೇವೆಯಲ್ಲಿ ನಿರತರಾಗಿದ್ದ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಪಟ್ಟಣದಲ್ಲಿ ಅತ್ಯುತ್ತಮವಾದ ಸುಂದರ ಉದ್ಯಾನವನವನ್ನು ನಿರ್ಮಿಸ ಲಾಗುವುದು. ಪುನೀತ್ ತಮ್ಮ ವಿಶೇಷ ನಟನೆ ಮೂಲಕ ಕನ್ನಡ ಭಾಷೆಯನ್ನು ಸಮೃದ್ಧಗೊಳಿಸಿದ್ದಾರೆ. ಕನ್ನಡ ನಾಡು-ನುಡಿ ರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗ ಟೊಂಕ ಕಟ್ಟಿ ನಿಲ್ಲಬೇಕು. ಜ್ಞಾನಪೀಠ ವಿಜೇತರು ಕನ್ನಡಭಾಷೆಗೆ ಹೊಸರೂಪ ನೀಡಿದ್ದಾರೆ. ಕನ್ನಡ ಸಾಹಿತ್ಯಸೃಜನಶೀಲ ಕಲಾವಿದರಿಂದ ಉತ್ತುಂಗಕ್ಕೇರಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಸಿ. ಶಿವಾನಂದ ಮಾತನಾಡಿ, ಹಂಪಿ ವಿಶ್ವವಿದ್ಯಾನಿಲಯದಲ್ಲಿ ಶಿವಾಕೋಟ್ಯಾಚಾರ್ಯ ಅವರ ಅಧ್ಯಯನ ಪೀಠ ಸ್ಥಾಪನೆಯಾಗಬೇಕು. ತಂಬ್ರಹಳ್ಳಿಯ ಐತಿಹಾಸಿಕ ಬಂಡೆ ರಂಗನಾಥ ದೇವಸ್ಥಾನದಲ್ಲಿ ಕನ್ನಡ ಉತ್ಸವವನ್ನು ಅದ್ಧೂರಿಯಿಂದ ಮಾಡಬೇಕು. ಕನ್ನಡ ಭಾಷೆಯಲ್ಲಿ ಹೆಚ್ಚುಅಂಕಗಳಿಸಿದ ವಿದ್ಯಾರ್ಥಿಗಳನ್ನು ಸರಕಾರ ವಿಶೇಷವಾಗಿ ಪ್ರೋತ್ಸಾಹಿಸಬೇಕು ಎಂದರು.
ತಹಶೀಲ್ದಾರ್ ಶರಣಮ್ಮ, ಕರ್ನಾಟಕ ರಕ್ಷಣಾ ವೇದಿಕೆಅಧ್ಯಕ್ಷ ಬುಡ್ಡಿ ಬಸವರಾಜ ಮಾತನಾಡಿದರು.ಈ ಸಂದರ್ಭದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕಪ್ರಶಸ್ತಿ ಪುರಸ್ಕೃತ ಶಿಕ್ಷಕ ಪರಮೇಶ್ವರ ಸೋಪ್ಪಿಮಠರನ್ನುಸನ್ಮಾನಿಸಿ ಗೌರವಿಸಲಾಯಿತು. ಜೊತೆಗೆ ವಿವಿಧಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿಗೌರವಿಸಲಾಯಿತು. ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಕನ್ನಡಾಂಬೆಯ ಸ್ತಬ್ಧ ಚಿತ್ರಗಳೊಂದಿಗೆ ಮೆರವಣಿಗೆ ಮುಖಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನಸೆಳೆದರು.
ತಾಪಂ ಇಒ ಹಾಲಸಿದ್ದಪ್ಪ ಪೂಜೇರಿ, ಪುರಸಭೆ ಮುಖ್ಯಾಧಿಕಾರಿ ಎಂ.ಕೆ. ಮುಗಳಿ, ಸಿಡಿಪಿಒ ಚೆನ್ನಪ್ಪ, ಸಮಾಜ ಕಲ್ಯಾಣ ಇಲಾಖೆಯ ಬಿ.ಎಂ. ದಿನೇಶ್,ತೋಟಗಾರಿಕೆ ಇಲಾಖೆಯ ಪರಮೇಶ್ವರಪ್ಪ, ಕೃಷಿ ಇಲಾಖೆಯ ಜೀವನ್‌ಸಾಬ್, ತಾಲೂಕ ವೈದ್ಯಾಧಿಕಾರಿ ಡಾ| ಶಿವರಾಜ್, ಬಿಸಿಯೂಟ ಅಧಿಕಾರಿ ರವಿನಾಯ್ಕ, ಬಿಸಿಎಂ ಅಧಿಕಾರಿ ರಮೇಶ್, ಜಿಪಂ ಕಾರ್ಯನಿರ್ವಾಹಕ ಅಭಿಯಂತರ ಸದಾಶಿವನಾಯ್ಕ, ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್, ಉಲುವತ್ತಿ ಬಾಬುವಲಿ, ಮರಿರಾಮಪ್ಪ, ಪವಾಡಿ ಹನುಮಂತಪ್ಪ, ಕನ್ನಿಹಳ್ಳಿ ಚಂದ್ರಶೇಖರ್, ರೈತ ಸಂಘದ ಶಂಶದ್ ಬೇಗಂ, ಕರವೇ ಅಧ್ಯಕ್ಷರಾದ ಎನ್.ಎಂ. ಗೌಸ್, ಈ ಭರತ್, ನಾಣಿಕೇರಿ ಭರಮಜ್ಜ ನಾಯಕ್, ಕಸ್ತೂರಿ ಕರ್ನಾಟಕ ಜನಪರ ವೇದಿ ಕೆ ಅಧ್ಯಕ್ಷ ಭೀಮರಾಜ್ ಇದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷಯಂಕಾರೆಡ್ಡಿ, ಕ್ಷೇತ್ರ ಶಿಕ್ಷಾಣಾಧಿಕಾರಿ ಹೊರಪೇಟೆ ಶೇಖರಪ್ಪ, ಬಿ. ಕೊಟ್ರಪ್ಪ ನಿರ್ವಹಿಸಿದರು.