Advertisement

ಕಸಾಪ ಚುನಾವಣೆ: ಸಮನ್ವಯ ಅಭ್ಯರ್ಥಿ ಆಯ್ಕೆಗೆ ಚಿಂತನೆ

11:47 AM Apr 06, 2021 | Team Udayavani |

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ತಾಲೂಕುಗಳ ನಡುವೆಸಮನ್ವಯ ಸಾಧಿಸುವ ನಿಟ್ಟಿನಲ್ಲಿ, ಸಮರ್ಥಅಭ್ಯರ್ಥಿ ಆಯ್ಕೆಗೆ ತೀವ್ರ ಕಸರತ್ತು ನಡೆಯುತ್ತಿದೆ. ಈ ಸಂಬಂಧ ಈಗಾಗಲೇ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿಯಲ್ಲಿ ಎರಡು ಸಭೆಗಳು ನಡೆದಿವೆ.

Advertisement

ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ತಾಲೂಕುಗಳ ಕನ್ನಡ ಸಾಹಿತ್ಯ ಪರಿಷತ್‌ನ ಸಮಾನ ಮನಸ್ಕ ಪ್ರಮುಖರು ಪಾಲ್ಗೊಂಡಿದ್ದ ಸಮನ್ವಯಸಮಿತಿ ಸಭೆಯಲ್ಲಿ ದೊಡ್ಡಬಳ್ಳಾಪುರ ನಗರಸಭೆಮಾಜಿ ಅಧ್ಯಕ್ಷ ತ.ನ.ಪ್ರಭುದೇವ್‌ ಮಾತನಾಡಿದರು. ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಕೇವಲ ಒಂದು ಸ್ಥಳ ಹಾಗೂ ಕೆಲವೇ ಜನರಿಗೆ ಸೀಮಿತವಾಗಿದೆ. ನಿಯಮಾವಳಿ, ಶಿಸ್ತು ಇಲ್ಲದಾಗಿದೆ. ವ್ಯಕ್ತಿಕೇಂದ್ರಿತವಾಗಿ ಸರ್ವರ ಒಳಗೊಳ್ಳುವಿಕೆಗೆ ಅವಕಾಶ ಇಲ್ಲದಾಗಿದೆ. ಹೀಗಾಗಿ ಈ ಬಾರಿಪ್ರಜ್ಞಾಪೂರ್ವಕವಾಗಿ ಜಿಲ್ಲೆಯ ಸಾಹಿತ್ಯಾಸಕ್ತರು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಿದೆ ಎಂದು ಹೇಳಿದರು.

ಸೂಕ್ತ ವ್ಯಕ್ತಿಯ ಆಯ್ಕೆಗೆ ಶ್ರಮ: ದೇವನಹಳ್ಳಿತಾಪಂ ಮಾಜಿ ಅಧ್ಯಕ್ಷ ಬಿ.ಕೆ.ಶಿವಪ್ಪ ಮಾತನಾಡಿ,ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಏ.7ರವರೆಗೆ ಸಲ್ಲಿಕೆಗೆ ಅವಕಾಶವಿದೆ. ಈಹಿನ್ನೆಲೆಯಲ್ಲಿ ಸ್ಪರ್ಧಿಸುವ ಎಲ್ಲಾ ಸ್ಪರ್ಧಾಳುಗಳೊಂ ದಿಗೆ ಚರ್ಚಿಸಿ ಸಮನ್ವಯ ಸಮಿತಿಯ ಉದ್ದೇಶಗಳನ್ನು ತಿಳಿಸಲಾಗುವುದು. ಬಹುಮುಖ್ಯವಾಗಿ ಅವಿರೋಧ ಆಯ್ಕೆಗೆ ಮೊದಲ ಪ್ರಾಶಸ್ತ್ಯ ನೀಡಲಾಗು ವುದು. ಒಂದು ವೇಳೆ ಚುನಾವಣೆ ಅನಿವಾರ್ಯವಾದರೆ ಸಮಿತಿ ನಿರ್ಣಾಯಕ ಪಾತ್ರ ವಹಿಸಿ ಸೂಕ್ತ ವ್ಯಕ್ತಿಯ ಆಯ್ಕೆಗೆ ಶ್ರಮಿಸಲಿದೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಆರ್‌.ರವಿಕಿರಣ್‌ ಮಾತನಾಡಿ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲದ ವ್ಯಾಪ್ತಿಯಲ್ಲಿ ಸಾಹಿತ್ಯ ಚಟುವಟಿಕೆಗಳನ್ನು ಚುರುಕುಗೊಳಿಸಲು ಸಮನ್ವಯ ಸಮಿತಿಯ ಮಾರ್ಗದರ್ಶನದಲ್ಲಿ ಕಾರ್ಯಪಡೆ ರಚನೆಯಾಗಬೇಕಿದೆ. ಈ ನಿಟ್ಟಿನಲ್ಲಿ ತಾಲೂಕು, ವ್ಯಕ್ತಿ ಹಿತಾಸಕ್ತಿಗಳನ್ನು ಬದಿಗಿರಿಸಿ ಸೂಕ್ತ ಅಭ್ಯರ್ಥಿಯ ಆಯ್ಕೆ ಅನಿವಾರ್ಯವಾಗಿದೆ ಎಂದು ಹೇಳಿದರು.

ಜಿಲ್ಲಾದ್ಯಂತ ಸಮನ್ವಯ ಸಮಿತಿ ಸಭೆಗಳನ್ನು ನಡೆಸಲು ಉದ್ದೇಶಿಸಿದ್ದು, ಏ.6ರಂದುಹೊಸಕೋಟೆಯಲ್ಲಿ ಹಾಗೂ ಏ.7ರಂದು ನೆಲಮಂಗಲದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಸಭೆಯಲ್ಲಿ ದೊಡ್ಡಬಳ್ಳಾಪುರ ಕನ್ನಡ ಪಕ್ಷದ ಅಧ್ಯಕ್ಷ ಸಂಜೀವನಾಯಕ್‌, ಕರವೇ ರಾಜ್ಯ ಪ್ರಧಾನಕಾರ್ಯದರ್ಶಿ ರಾಜಘಟ್ಟ ರವಿ, ಮುಖಂಡರಾದ ಪು.ಮಹೇಶ್‌, ಡಿ.ಸಿ.ಚೌಡರಾಜು, ಆನಂದ್‌,ದೇವನಹಳ್ಳಿ ತಾ.ಕಸಾಪ ಅಧ್ಯಕ್ಷ ನಂಜೇಗೌಡ,ಉಪಾಧ್ಯಕ್ಷ ರಾಮಾಂಜಿನಪ್ಪ, ಕೋಶಾಧ್ಯಕ್ಷಅಶ್ವತ್ಥಗೌಡ, ಸಮ್ಮೇಳನಾಧ್ಯಕ್ಷ ಕೃಷ್ಣಪ್ಪ, ಹೋಬಳಿ ಅಧ್ಯಕ್ಷರುಗಳಾದ ಡಾ.ಮೂರ್ತಿ, ಹಾರೋಹಳ್ಳಿ ಸುಬ್ರಹ್ಮಣ್ಯ, ಐಟಿ ರಾಮಾಂಜಿನಪ್ಪ, ಮುಖಂಡ ನಾಗರಾಜ್‌, ಕರವೇ ಅಧ್ಯಕ್ಷ ಬಾಬು,ಹೊಸಕೋಟೆ ತಾ.ಕಸಾಪ ಮಾಜಿ ಅಧ್ಯಕ್ಷ ಉಮೇಶ್‌ ಮತ್ತಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next