Advertisement

ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ನೇರವೇರಿಸಲು ಸೂಚನೆ

10:22 AM Dec 04, 2018 | Team Udayavani |

ಕಲಬುರಗಿ: ನಗರದಲ್ಲಿ ಡಿ. 8 ಮತ್ತು 9 ರಂದು ಎರಡು ದಿನಗಳ ಕಾಲ ನಡೆಯುವ ಕಲಬುರಗಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ನರವೇರಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೆಶ್‌ಕುಮಾರ ಸೂಚಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೇರೆ ಜಿಲ್ಲೆಗಳಿಂದ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಗಮಿಸುವ ಅತಿಥಿಗಳಿಗೆ ಹಾಗೂ ಆಹ್ವಾನಿತರಿಗೆ ಊಟ ಮತ್ತು ವಸತಿ ಕೊರತೆ ಆಗದಂತೆ ನೋಡಿಕೊಳ್ಳಲು ಸೂಚಿಸಿದರು.

ಕನ್ನಡ ಸಾಹಿತ್ಯ ಸಮ್ಮೆಳನ ನಡೆಯುವ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ಆವರಣವನ್ನು ಮಹಾನಗರ ಪಾಲಿಕೆಯವರು ಸ್ವತ್ಛಗೊಳಿಸಬೇಕು. ಮೆರವಣಿಗೆಯಲ್ಲಿ ಹೆಚ್ಚಿನ ಕಲಾತಂಡಗಳು ಭಾಗವಹಿಸಬೇಕು. ನಗರೇಶ್ವರ ಶಾಲೆ ಯಿಂದ ಹೊರಟು ಕನ್ನಡ ಭವನದಲ್ಲಿ ಕೊನೆಗೊಳ್ಳುವ ಸಮ್ಮೆಳನದ ಮೆರವಣಿಗೆಗೆ ಸೂಕ್ತ ಪೊಲೀಸ್‌ ಬಂದೊಬಸ್ತ ಕಲ್ಪಿಸಬೇಕು ಎಂದು ಸೂಚಿಸಿದರು.

ಕನ್ನಡ ಭವನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಸಾಹಿತ್ಯ ಸಮ್ಮೆಳನದಲ್ಲಿ ಯಾವುದೇ ಗೊಂದಲ, ತೊಂದರೆ ಆಗದಂತೆ ನೋಡಿಕೊಂಡು ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಹೇಳಿದರು.

ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವೀರಭದ್ರ ಸಿಂಪಿ ಮಾತನಾಡಿ, ಸಮ್ಮೆಳನಕ್ಕೆ ಮೊದಲ ದಿನ ಆಗಮಿಸುವ ಸುಮಾರು 3000 ಜನ ಹಾಗೂ ಎರಡನೇ ದಿನ ಸುಮಾರು 2000 ಜನ ಹೀಗೆ ಒಟ್ಟು 5000 ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಬೇರೆ ಜಿಲ್ಲೆಗಳಿಂದ ಆಗಮಿಸುವ ಸಾಹಿತಿಗಳಿಗೆ ಹಾಗೂ ಅತಿಥಿಗಳಿಗೆ ಮಹಲ್‌-ಎ-ಶಾಹಿ ಅತಿಥಿಗೃಹದಲ್ಲಿ ಕೋಣೆ ಕಾಯ್ದಿರಿಸಲಾಗಿದೆ. 

Advertisement

ಕಾರ್ಯಕ್ರಮದ ವೇದಿಕೆ, ಮೊಮೆಂಟೊ ವ್ಯವಸ್ಥೆ ಮಾಡಲಾಗಿದೆ. ಮೆರವಣಿಗೆಯಲ್ಲಿ ಸಾಹಿತ್ಯ ಪರಿಷತ್ತಿನಿಂದ 14 ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 3 ಕಲಾ ತಂಡಗಳು ಭಾಗವಹಿಸಲಿವೆ. ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಅನ್ಯ ಕರ್ತವ್ಯದ ಮೇರೆಗೆ ಭಾಗವಹಿಸಲು ಪರವಾನಿಗೆ ನೀಡಬೇಕು. ಸಮ್ಮೆಳನದ ವ್ಯವಸ್ಥೆಗೆ ಸ್ಕೌಟ್ಸ್‌ ಮತ್ತು ಗೈಡ್ಸ್‌ ಹಾಗೂ ಎನ್‌ಎಸ್‌ಎಸ್‌ ವಿಧ್ಯಾರ್ಥಿಗಳನ್ನು ನೇಮಿಸಬೇಕು ಎಂದು ಮಾಹಿತಿ ನೀಡಿದರು.

ಕಲಬುರಗಿ ಕನ್ನಡ ಸಾಹಿತ್ಯ ಪರಿಷತ್ತಿನ ಡಾ| ವಿಜಯಕುಮಾರ ಪರುಟೆ, ಮಡಿವಾಳಪ್ಪ ನಾಗರಹಳ್ಳಿ, ದವಲತರಾಯ ಮಾಲಿಪಾಟೀಲ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಾಮೇಶ್ವರಪ್ಪ ಮತ್ತಿತ್ತರ ಅಧಿಕಾರಿಗಳು ಪಾಲ್ಗೊಂಡಿದ್ದರು .

Advertisement

Udayavani is now on Telegram. Click here to join our channel and stay updated with the latest news.

Next