Advertisement
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ, ಸಮ್ಮೇಳನ ಸ್ವಾಗತ ಸಮಿತಿಯ ಆಶ್ರಯದಲ್ಲಿ ಸಂಪಾಜೆ ಗ್ರಾಮದ ಗೂನಡ್ಕ ಬೀಜದಕಟ್ಟೆಯ ಸಜ್ಜನ ಸಭಾಭವನದಲ್ಲಿ ನಡೆದ ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.
ಭಾಷೆ ಎಲ್ಲದಕ್ಕೂ ಮೂಲ. ಆದುದರಿಂದ ಭಾಷೆ, ಸಾಹಿತ್ಯ, ಸಂಸ್ಕೃತಿಯ ಮಧ್ಯೆ ಅವಿನಾಭಾವ ಸಂಬಂಧ ಇದೆ. ಭಾಷೆಯು ಔಚಿತ್ಯ ಮತ್ತು ಔನತ್ಯವನ್ನು ಸಾಧಿಸಲು ಸಾಹಿತ್ಯ ಮತ್ತು ಸಂಸ್ಕೃತಿ ಸಹಾಯಕ. ಸಾಹಿತ್ಯ ಯಾವುದು ಬೇಕು, ಬೇಡ ಎಂಬುದನ್ನು ಹೇಳುತ್ತದೆ ಎಂದು ಅವರು ಹೇಳಿದರು. ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಶಿಕ್ಷಕ ಕೆ.ಆರ್. ಗಂಗಾಧರ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು.
Related Articles
Advertisement
ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ರಾಮ್ ಸುಳ್ಳಿ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಸ್ಮರಣಸಂಚಿಕೆ ಸಂಪಾದಕ ಸಂಜೀವ ಕುದ್ಪಾಜೆ ಸ್ಮರಣ ಸಂಚಿಕೆಯ ಬಗ್ಗೆ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಸಮ್ಮೇಳನದ ಬಗ್ಗೆ ಆಶಯನುಡಿ ವ್ಯಕ್ತಪಡಿಸಿದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಪೂವಪ್ಪ ಕಣಿಯೂರು ನಿಕಟಪೂರ್ವ ಅಧ್ಯಕ್ಷರ ನೆಲೆಯಲ್ಲಿ ಮಾತನಾಡಿದರು. ಸಮ್ಮೇಳನ ಸಂಘಟನ ಸಮಿತಿಯ ಪೋಷಕಾಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಪ್ರಧಾನ ಕಾರ್ಯದರ್ಶಿ ದಾಮೋದರ ಮಾಸ್ತರ್, ಸಾಹಿತ್ಯ ಪರಿಷತ್ ಕೋಶಾಧಿಕಾರಿ ದಯಾನಂದ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸ್ವಾಗತ ಸಮಿತಿ ಅಧ್ಯಕ್ಷ ಉಮ್ಮರ್ ಬೀಜದಕಟ್ಟೆ ಸಾcಗತಿಸಿ, ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಬೇಬಿ ವಿದ್ಯಾ ನಿರೂಪಿಸಿ ದರು. ಚಿದಾನಂದ ಯು.ಎಸ್. ನಿರ್ವಹಿಸಿದರು. ಅರಂತೋಡು ನೆಹರು ಸ್ಮಾರಕ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ನಾಡಗೀತೆ, ರೈತಗೀತೆ ಹಾಡಿದರು.
ಕನ್ನಡ ಉಳಿಸಿ ಬೆಳೆಸುವ ಕೆಲಸ ಮಾಡಬೇಕುಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಹಿಂಗಾರ ಅರಳಿಸುವ ಮೂಲಕ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ, ಕನ್ನಡ ಉಳಿಸಿ ಬೆಳೆಸುವ ಕೆಲಸ ಮಾಡಬೇಕು. ಅದಕ್ಕೆ ಸಾಹಿತ್ಯ ಸಮ್ಮೇಳನಗಳು ಪೂರಕವಾಗಿವೆ. ನಮ್ಮಲ್ಲಿ ಕನ್ನಡಾಭಿಮಾನ ಹೆಚ್ಚಬೇಕು. ನಮ್ಮ ನಾಡು, ನುಡಿ, ಧಾರ್ಮಿಕ ಸಂಸ್ಕೃತಿಯನ್ನು ಉಳಿಸುವ ಕೆಲಸ ನಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ಸರಕಾರ ಗಮನ ಹರಿಸುತ್ತಿದೆ ಎಂದರು.