Advertisement

“ಮುಖ್ಯ ವೇದಿಕೆ ಅಂತಿಮಗೊಳಿಸಿ”

02:53 PM Feb 12, 2021 | Team Udayavani |

ಹಾವೇರಿ: 86ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆ ಸೇರಿದಂತೆ ವಿವಿಧ ಸ್ಟಾಲ್‌ಗ‌ಳ ವಿನ್ಯಾಸವನ್ನು ಫೆ.15ರೊಳಗೆ ಅಂತಿಮಗೊಳಿಸಿ ಸಲ್ಲಿಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಅಖೀಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆಯ ನಿರ್ಮಾಣ ಹಾಗೂ ವಿವಿಧ ಮಳಿಗೆಗಳ ವಿನ್ಯಾಸ ಕುರಿತಂತೆ ಎಂಸಿಎ ತಂಡದ ಅಧಿಕಾರಿಗಳೊಂದಿಗೆ ಗುರುವಾರ ಉದ್ದೇಶಿತ ಸ್ಥಳ  ಪರಿಶೀಲನೆ ನಡೆಸಿ ಮಾತನಾಡಿದರು.

ಅಭಿಯಂತರರು ಹಾಗೂ ಎಂಸಿಎ ತಂಡದೊಂದಿಗೆ ಚರ್ಚಿಸಿದ ಜಿಲ್ಲಾ ಧಿಕಾರಿಗಳು, ಮುಖ್ಯ ವೇದಿಕೆ ನಿರ್ಮಾಣ, ಪುಸ್ತಕ ಮಳಿಗೆಗಳ ನಿರ್ಮಾಣ, ವಸ್ತು ಪ್ರದರ್ಶನ ಮಳಿಗೆಗಳು, ಊಟದ ಪೆಂಡಾಲ್‌, ಮಾಧ್ಯಮ ಕೇಂದ್ರ, ಫುಡ್‌ ಕೋರ್ಟ್‌, ವಾಹನ ನಿಲುಗಡೆ, ನೋಂದಣಿ ಕೌಂಟರ್‌, ಸಾರ್ವಜನಿಕ ಓಡಾಟಕ್ಕೆ ರಸ್ತೆ ನಿರ್ಮಾಣ, ಪಾರ್ಕಿಂಗ್‌ ವ್ಯವಸ್ಥೆ, ಸಮಾನಾಂತರ ವೇದಿಕೆಗಳ ನಿರ್ಮಾಣ ಹಾಗೂ ವೇದಿಕೆಗಳ ನೀಲನಕ್ಷೆಗಳನ್ನು ಅಂತಿಮಗೊಳಿಸಿ ಫೆ.15 ರೊಳಗೆ ಸಲ್ಲಿಸಲು ಸೂಚನೆ ನೀಡಿದರು.

ಸಮ್ಮೇಳನಕ್ಕೆ ಪೂರ್ವ ಸಿದ್ಧತೆಗಳು ನಿರಂತರವಾಗಿ ನಡೆಯಬೇಕು. ಸಮ್ಮೇಳನ ನಡೆಯುವ ಖಾಲಿ ಜಮೀನಿನ ಸ್ವತ್ಛತೆ ಮತ್ತು ಸಮತಟ್ಟುಗೊಳಿಸುವ ಕಾರ್ಯ, ತಾತ್ಕಾಲಿಕ ರಸ್ತೆ ನಿರ್ಮಾಣ ಕಾರ್ಯ ತ್ವರಿತವಾಗಿ ಆರಂಭಿಸುವಂತೆ ಅ ಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯ ವೇದಿಕೆ ಹೊರತುಪಡಿಸಿ ಎರಡು ಸಮಾನಾಂತರ ವೇದಿಕೆ ನಿರ್ಮಾಣ ಅಗತ್ಯವಿದೆ. ಒಂದು ಸಾವಿರದಿಂದ ಒಂದೂವರೆ ಸಾವಿರ ಸಾಮರ್ಥ್ಯದ ಆಸನ ವ್ಯವಸ್ಥೆಯ ಸಮಾನಾಂತರ ವೇದಿಕೆ ಅವಶ್ಯಕತೆ ಇದ್ದು, ಹಳೆ ಪಿಬಿ ರಸ್ತೆಯಲ್ಲಿರುವ ಸಿದ್ಧರಾಮೇಶ್ವರ ಸಮುದಾಯ ಭವನ, ಅಂಬೇಡ್ಕರ್‌ ಭವನ, ಜಿ.ಎಚ್‌.ಕಾಲೇಜ್‌ ಕ್ರೀಡಾಂಗಣದಲ್ಲಿ ತಾತ್ಕಾಲಿಕ ವೇದಿಕೆ ನಿರ್ಮಿಸುವ ಕುರಿತಂತೆ ಅಧಿಕಾರಿಗಳಿಂದ ಸಲಹೆ ಪಡೆದರು.

Advertisement

ಇದನ್ನೂ ಓದಿ :ಮೇಯರ್‌ರಿಂದ ಯುಜಿಡಿ ಕಾಮಗಾರಿ ಪರಿಶೀಲನೆ  

ಅಪರ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್‌ಪಿ ವಿಜಯಕುಮಾರ ಸಂತೋಷ್‌, ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ತಾಲೂಕು ಅಧ್ಯಕ್ಷ ಯಲ್ಲಪ್ಪ ಆಲದಕಟ್ಟಿ, ಕಾರ್ಯದರ್ಶಿ ಎಸ್‌.ಎಸ್‌.ಬೇವಿನಮರದ, ಜಿಪಂ ಕಾರ್ಯ ನಿರ್ವಾಹಕ ಎಂಜಿನಿಯರ್‌ ಚನ್ನವೀರಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ವಿರಕ್ತಿಮಠ, ಪೌರಾಯುಕ್ತ ಪರಶುರಾಮ ಚಲವಾದಿ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕ ಜಗದೀಶ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜಪ್ಪ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ|ರಾಜೀವ ಕೂಲೇರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಮಠದ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಕೈಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ವಿನಾಯಕ ಜೋಶಿ, ಬಿಇಒ ಎಂ.ಎಚ್‌.ಪಾಟೀಲ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next