Advertisement
ಪ್ರತಿ ವರ್ಷ ಮಾರ್ಚ್ ಒಂದರಂದು ಕನ್ನಡ ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ| ಕಲ್ಮಾಡಿ ಶಾಮರಾವ್ ಅವರ ಜನ್ಮದಿನದ ನಿಮಿತ್ತ ಕನ್ನಡ ಸಂಘದ ಸದಸ್ಯರು ಮತ್ತು ಪರಿವಾರದ ಸದಸ್ಯರಿಗಾಗಿ ಈ ಕಾರ್ಯಕ್ರಮವನ್ನು ಆಚರಿಸುತ್ತಾ ಬಂದಿದೆ. ಈ ವರ್ಷ ದಿವಂಗತ ಡಾ| ಕಲ್ಮಾಡಿ ಶಾಮರಾಯರ ಜನ್ಮಶತಾಬ್ದಿ ವರ್ಷದಲ್ಲಿ ಅವರ ಮೆಚ್ಚಿನ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಹಲವಾರು ಸಮಾಜೋಪಯೋಗಿ ಕಾರ್ಯಕ್ರಮಗಳನ್ನು ವೈಶಿಷ್ಟéಪೂರ್ಣವಾಗಿ ಶ್ರದ್ಧಾಪೂರ್ವಕವಾಗಿ ಆಚರಿಸಿ ಅವರಿಗೆ ಆದರಾಂಜಲಿ ಅರ್ಪಿಸಲಾಯಿತು.
ಇಂದಿನ ಸಮಾರಂಭ ಮುಖ್ಯವಾಗಿ ಸಂಘದ ಸದಸ್ಯರಿಗಾಗಿ ತಮ್ಮಲ್ಲಿ ಹುದುಗಿರುವ ಕಲಾ ಪ್ರತಿಭೆಗಳಿಗೆ ವೇದಿಕೆ ಒದಗಿಸಿ ಅವರಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಒದಗಿ ಬರಲೆಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾ ಪ್ರದರ್ಶನ ನೀಡುತ್ತಿರು
ವುದು ಸಂತಸದ ಸಂಗತಿಯಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ ನಿಧನರಾದ ವಿಶ್ವಸ್ತ ಗೋವರ್ಧನ ಶೆಟ್ಟಿ ಮತ್ತು ಸದಸ್ಯ ಮಾಧವ ಹರಿಹರ ಅವರಿಗೆ ಎರಡು ನಿಮಿಷ ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕಾರ್ಯಕ್ರಮದಂಗವಾಗಿ ಭಜನೆ, ವಿವಿಧ ನೃತ್ಯ, ಕವಿತೆ ಮತ್ತು ಹಾಸ್ಯ ಚುಟುಕುಗಳು ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ನೆರೆದ ಕಲಾರಸಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು.
Related Articles
Advertisement
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು