ಪುಣೆ: ಪುಣೆ ಕನ್ನಡ ಸಂಘ ಹಾಗೂ ಪುಣೆ ಬಂಟರ ಸಂಘದ ಜಂಟಿ ಆಯೋಜನೆಯಲ್ಲಿ ಕರಾವಳಿ ಕರ್ನಾಟಕದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಪರ್ಕ ಪ್ರಮುಖರಾಗಿರುವ ಡಾ| ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಸಾರ್ವಜನಿಕ ಸಮ್ಮಾನ ಸಮಾರಂಭವು ಜು. 3 ರಂದು ಪುಣೆ ಕನ್ನಡ ಸಂಘದ ಡಾ| ಕಲ್ಮಾಡಿ ಶ್ಯಾಮರಾವ್ ಕನ್ನಡ ಮಾಧ್ಯಮ ಹೈಸ್ಕೂಲಿನ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುಣೆ ಕನ್ನಡ ಸಂಘದ ಅಧ್ಯಕ್ಷ ಕುಶಲ್ ಹೆಗ್ಡೆ ಇವರು ಮಾತನಾಡಿ, ನಮ್ಮ ಕರಾವಳಿ ಕರ್ನಾಟಕದ ಮಹಾನ್ ಮೇಧಾವಿ, ಶೈಕ್ಷಣಿಕ ಹರಿಕಾರ, ಸಾಮಾಜಿಕ ಕ್ಷೇತ್ರದಲ್ಲಿ ಮಹತ್ತರವಾದ ಕಾರ್ಯವನ್ನು ಮಾಡುತ್ತಿರುವ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಇಂದು ನಮ್ಮೊಂದಿಗಿರುವುದು ನಮಗೆಲ್ಲರಿಗೂ ಅಭಿಮಾನದ ವಿಷಯವಾಗಿದೆ. ಅವರು ಮಾಡಿದ ಸಾಧನೆಗಳನ್ನು ಕೇಳುವಾಗ ಒಬ್ಬ ಮನುಷ್ಯ ಇಷ್ಟೊಂದು ಸಾಧನೆ ಮಾಡಲು ಸಾಧ್ಯವೋ ಎಂಬ ಅನುಭವವಾಗುತ್ತಿದ್ದು ಅವರ ಕಾರ್ಯಶೈಲಿಯನ್ನು ಅವರ ಶಿಕ್ಷಣ ಸಂಸ್ಥೆಗಳನ್ನು ನಾವೆಲ್ಲರೂ ಅಗತ್ಯ ಭೇಟಿ ಮಾಡಿ ಪ್ರೇರಣೆಯನ್ನು ಪಡೆದುಕೊಳ್ಳುವ ಅಗತ್ಯತೆ ನಮಗಿದೆ. ಡಾ| ಕಲ್ಲಡ್ಕ ಪ್ರಭಾಕರ ಭಟ್ ಅವರ ಶೈಕ್ಷಣಿಕ ಮತ್ತು ಸಮಾಜ ಸೇವೆ ಎಲ್ಲರಿಗೂ ಆದರ್ಶನೀಯವಾಗಿದೆ ಎಂದು ನುಡಿದರು.
ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಅವರು ಡಾ| ಪ್ರಭಾಕರ ಭಟ್ ಅವರನ್ನು ಪರಿಚಯಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಶಂಭು ಶೆಟ್ಟಿಯವರು ಉಪಸ್ಥಿತರಿದ್ದರು. ಡಾ| ಭಟ್‌ರನ್ನು ವಿವಿಧ ಸಂಘ ಸಂಸ್ಥೆಗಳ ಪರವಾಗಿ ಶಾಲು ಹೊದೆಸಿ, ಪುಷ್ಪಗುತ್ಛ, ಗಣೇಶ ಮೂರ್ತಿಯನ್ನು ನೀಡಿ ಸಮ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪುಣೆ ಗುರುದೇವಾ ಸೇವಾ ಬಳಗದ ಅಧ್ಯಕ್ಷ ಸದಾನಂದ ಕೆ. ಶೆಟ್ಟಿ, ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ, ಸಿ. ಎ. ಸದಾನಂದ ಶೆಟ್ಟಿ, ಪಿಂಪ್ರಿ-ಚಿಂಚಾÌಡ್ ಬಂಟರ ಸಂಘದ ಮಾಜಿ ಅಧ್ಯಕ್ಷ ಎರ್ಮಾಳ್ ಸೀತಾರಾಮ ಶೆಟ್ಟಿ, ಪಿಂಪ್ರಿ-ಚಿಂಚಾÌಡ್ ಹೋಟೆಲ್ ಅಸೋಸಿಯೇಶನ್ ಅಧ್ಯಕ್ಷ ಕೆ. ಪದ್ಮನಾಭ ಶೆಟ್ಟಿ, ಪುಣೆ ಅಯ್ಯಪ್ಪ ಯಕ್ಷಗಾನ ಮಂಡಳಿ ಅಧ್ಯಕ್ಷ ಪಾಂಗಾಳ ವಿಶ್ವನಾಥ ಶೆಟ್ಟಿ, ಪುಣೆ ತುಳುಕೂಟದ ಅಧ್ಯಕ್ಷ ತಾರನಾಥ ಕೆ. ರೈ ಮೇಗಿನಗುತ್ತು, ತುಳುಕೂಟದ ಪಿಂಪ್ರಿ-ಚಿಂಚಾÌಡ್ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮ್ ಸುವರ್ಣ, ಹವ್ಯಕ ಸಂಘದ ಮದಂಗಲ್ಲು ಆನಂದ ಭಟ್, ಅಯ್ಯಪ್ಪ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಶೆಟ್ಟಿ, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಮಹಾಗಣಪತಿ ಯಕ್ಷಗಾನ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ವಸಂತ್ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಕುಶಲ್ ಹೆಗ್ಡೆ ಅವರು ಸ್ವಾಗತಿಸಿದರು. ಕನ್ನಡ ಮಾಧ್ಯಮ ಹೈಸ್ಕೂಲ್ ಮುಖ್ಯೋಪಾಧ್ಯಾಯರಾದ ಚಂದ್ರಕಾಂತ ಹಾರಕೂಡೆ ವಂದಿಸಿದರು. ಪುಣೆ ಕನ್ನಡ ಸಂಘ ಹಾಗೂ ಬಂಟರ ಸಂಘ ಪುಣೆ ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು