ಮುಂಬಯಿ: ಕನ್ನಡ ಸಂಘ ಸಾಂತಾಕ್ರೂಜ್ ಇದರ ವಜ್ರಮಹೋತ್ಸವ ಸಮಾರೋಪ ಸಮಾರಂಭವು ಡಿ. 16 ರಂದು ಸಂಜೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ.ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ಸಮಾರಂಭದಲ್ಲಿ ಸಂಘದ ಅರುವತ್ತು ವರ್ಷಗಳಲ್ಲಿ ದೀರ್ಘಾವಧಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪ್ರಸಕ್ತ ಅಧ್ಯಕ್ಷ ಎಲ್. ವಿ. ಅಮೀನ್ ಅವರಿಗೆ “ಸಮಾಜ ಸ್ನೇಹಿ’ ಬಿರುದು ಪ್ರದಾನಿಸಿ ಪತ್ನಿ ಸುಧಾ ಎಲ್. ವಿ. ಅಮೀನ್, ಪುತ್ರಿಯರಾದ ಇಶಾ ಎಲ್. ವಿ. ಅಮೀನ್, ಡಾ| ಇತಿಕಾ ಎಲ್. ವಿ. ಅಮೀನ್, ಸೌಮ್ಯಾ ಎನ್. ಸಾಲ್ಯಾನ್ ಮತ್ತು ನವೀನ್ ಸಾಲ್ಯಾನ್ ಅವರನ್ನು ಸಮ್ಮಾನಿಸಲಾಯಿತು. ವಜ್ರಮಹೋತ್ಸವ ಸಮಿತಿಯ ಕಾರ್ಯಧ್ಯಕ್ಷ ಬಿ. ಆರ್. ಪೂಂಜ, ಗೌರವಾಧ್ಯಕ್ಷರಾದ ನಾರಾಯಣ ಎಸ್. ಶೆಟ್ಟಿ ಮತ್ತು ಪ್ರಮೀಳಾ ನಾರಾಯಣ್ ದಂಪತಿ ಮತ್ತು ಎನ್. ಎಂ. ಸನಿಲ್ ಮತ್ತು ಲೀಲಾ ಸನಿಲ್ ದಂಪತಿ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸುಜಾತಾ ಆರ್. ಶೆಟ್ಟಿ ಮತ್ತು ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್ ಮತ್ತು ಸಾಮಾಜಿಕ ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ಲಕ್ಷ್ಮೀ ಎನ್. ಕೋಟ್ಯಾನ್ ಅವರನ್ನು ಸಮ್ಮಾನಿಸಲಾಯಿತು.
ಅತಿಥಿ-ಗಣ್ಯರುಗಳಾದ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಬಿಲ್ಲವ ಛೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟಿÅàಸ್ ಇದರ ಕಾರ್ಯಾಧ್ಯಕ್ಷ ಎನ್. ಟಿ. ಪೂಜಾರಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್. ಪೂಜಾರಿ, ಉಪಾಧ್ಯಕ್ಷ ಹರೀಶ್ ಜಿ. ಅಮೀನ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಆರ್ಥಿಕ ತಜ್ಞ ಡಾ| ಆರ್. ಕೆ. ಶೆಟ್ಟಿ, ಸೋನಿ ಸ್ಟೀಲ್ ಆ್ಯಂಡ್ ಎಪ್ಲಾಯನ್ಸಸ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಪಾಂಡುರಂಗ ಎಸ್. ಶೆಟ್ಟಿ, ಅಖೀಲ ಭಾರತ ತುಳು ಒಕ್ಕೂಟ ಮಂಗಳೂರು ಅಧ್ಯಕ್ಷ ಧರ್ಮಪಾಲ ಯು. ದೇವಾಡಿಗ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷ ಜಯಕೃಷ್ಣ ಎ. ಶೆಟ್ಟಿ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ, ಬೋಂಬೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ನ್ಯಾಯವಾದಿ ಸುಭಾಷ್ ಬಿ. ಶೆಟ್ಟಿ, ಭಾರತ್ ಬ್ಯಾಂಕ್ ನಿರ್ದೇಶಕರಾದ ನ್ಯಾಯವಾದಿ ಸೋಮನಾಥ್ ಬಿ. ಅಮೀನ್, ತೀಯಾ ಸಮಾಜ ಮುಂಬಯಿ ನಿಕಟಪೂರ್ವಾಧ್ಯಕ್ಷ ಚಂದ್ರಶೇಖರ್ ಆರ್. ಬೆಳ್ಚಡ, ದಿವ್ಯಾ ಸಾಗರ್ ಸಮೂಹದ ಆಡಳಿತ ನಿರ್ದೇಶಕ ಮುದ್ರಾಡಿ ದಿವಾಕರ ಶೆಟ್ಟಿ ಮೊದಲಾದವರನ್ನು ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ, ನಿಧಿ ಸಂಗ್ರಹ ಸಮಿತಿಯ ಕಾರ್ಯಾಧ್ಯಕ್ಷ ಗುಣಪಾಲ ಶೆಟ್ಟಿ ಐಕಳ ಹಾಗೂ ಇತರ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.
ಕನ್ನಡ ಸಂಘ ಸಾಂತಾಕ್ರೂಜ್ ಅಧ್ಯಕ್ಷ ಎಲ್. ವಿ. ಅಮೀನ್ ಘನಾಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಸಂಘದ ವಿದ್ಯಾದಾನಿಗಳಾದ ಪದ್ಮನಾಭ ಎಸ್. ಪಯ್ಯಡೆ, ಎನ್. ಟಿ. ಪೂಜಾರಿ, ಡಾ| ಆರ್. ಕೆ. ಶೆಟ್ಟಿ, ಹರೀಶ್ ಜಿ. ಅಮೀನ್, ಸ್ಮರಣ ಸಂಚಿಕೆ ಮುದ್ರಕ ಪ್ರಸನ್ನ ಶೆಟ್ಟಿ, ಹರೀಶ್ ಪೂಜಾರಿ ಕೊಕ್ಕರ್ಣೆ ಇವರನ್ನು ಅಧ್ಯಕ್ಷರು ಸಮ್ಮಾನಿಸಿ ಗೌರವಿಸಿದರು. ಗೌರವ ಪ್ರಧಾನ ಕೋಶಾಧಿಕಾರಿ ಸುಧಾಕರ್ ಉಚ್ಚಿಲ್, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷೆ ವನಿತಾ ವೈ. ನೋಂದ, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಗೌರವ ಪ್ರಧಾನ ಕಾರ್ಯದರ್ಶಿ ಸುಜಾತಾ ಆರ್. ಶೆಟ್ಟಿ, ಗೌರವ ಪ್ರಧಾನ ಕೋಶಾಧಿಕಾರಿ ಸುಧಾಕರ್ ಉಚ್ಚಿಲ್, ವಜ್ರಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನಾರಾಯಣ ಎಸ್. ಶೆಟ್ಟಿ ಮತ್ತು ಎನ್. ಎಂ. ಸನಿಲ್, ಕಾರ್ಯಧ್ಯಕ್ಷ ಬಿ. ಆರ್. ಪೂಂಜ, ಸ್ಮರಣ ಸಂಚಿಕೆ ಸಮಿತಿ ಕಾರ್ಯಾಧ್ಯಕ್ಷ ಬನ್ನಂಜೆ ರವೀಂದ್ರ ಅಮೀನ್, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷೆ ವನಿತಾ ವೈ. ನೋಂದಾ, ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಮತ್ತು ವಜ್ರ ಮಹೋತ್ಸವ ಆಚರಣಾ ಸಮಿತಿಯ ಮುಖ್ಯಸ್ಥರು, ಸಲಹೆಗಾರರು, ಮಾರ್ಗದರ್ಶಕರ ನೇತೃತ್ವದಲ್ಲಿ ಸಮಾರಂಭವು ಜರಗಿತು.
ಚಿತ್ರ- ವರದಿ : ರೋನ್ಸ್ ಬಂಟ್ವಾಳ್