ಬೆಂಗಳೂರು: ಕನ್ನಡದ ಹಿರಿಯ ಹಾಸ್ಯನಟ ದೊಡ್ಡಣ್ಣ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ಬುಧವಾರ ದೊಡ್ಡಣ್ಣ ಅವರ ಹೃದಯಬಡಿತದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸದ್ಯ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎನ್ನಲಾಗುತ್ತಿದೆ. ಇಂದು ಶಾಶ್ವತ ಪೇಸ್ ಮೇಕರ್ ಅಳವಡಿಸುವ ಕಾರ್ಯ ನಡೆದಿದ್ದು, ಸದ್ಯ ಅವರು ಐಸಿಯುಲ್ಲಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.
ಮೂರು ದಿನಗಳ ಕಾಲ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ನಂತರ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ನಾನು ಥಿಯೇಟರ್ ನಿಂದ ಸ್ಟಾರ್ ಆದವನು…ಒಟಿಟಿಯಲ್ಲಿ ರಿಲೀಸ್‌ಗೆ ಆಸಕ್ತಿ ಇಲ್ಲ
800ಕ್ಕೂ ಅಧಿಕ ಸಿನಿಮಾಗಳಲ್ಲಿ ದೊಡ್ಡಣ್ಣ ನಟಿಸಿದ್ದಾರೆ. 1981ರಲ್ಲಿ ‘ಕೂಡಿ ಬಾಳಿದರೆ ಸ್ವರ್ಗ ಸುಖ’ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದ ಅವರು ತೆಲುಗು, ತಮಿಳು ಭಾಷೆಯ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.