Advertisement

‘ಕಲಾ ತಪಸ್ವಿ’ ರಾಜೇಶ್ ಇನ್ನಿಲ್ಲ

08:15 AM Feb 19, 2022 | Team Udayavani |

ಬೆಂಗಳೂರು: ಚಂದನವನದ ಖ್ಯಾತ ನಟ ‘ಕಲಾ ತಪಸ್ವಿ’ ರಾಜೇಶ್​ ಅವರು ಇಂದು ಮುಂಜಾನೆ (ಶನಿವಾರ, ಫೆ.19)​ ಕೊನೆಯುಸಿರು ಎಳೆದಿದ್ದಾರೆ.

Advertisement

ತೀವ್ರ ಉಸಿರಾಟದ ಸಮಸ್ಯೆ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಫೆ.9ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ರಾಜೇಶ್ ಅವರಿಗೆ 89 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿದ್ದ ರಾಜೇಶ್​​ ಅವರಿಗೆ ವೆಂಟಿಲೇಟರ್​ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಕಡೆಗೂ ರಾಜೇಶ್​ ಬದುಕುಳಿಯಲಿಲ್ಲ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ಅಭಿಮಾನಿಗಳು ಮತ್ತು ಆಪ್ತರು ಕಂಬಿನಿ ಮಿಡಿಯುತ್ತಿದ್ದಾರೆ.

ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

1932ರ ಏ.15ರಂದು ಬೆಂಗಳೂರಿನಲ್ಲಿ ಜನಿಸಿದ್ದ ರಾಜೇಶ್, ಅಭಿನಯದ ಬಗ್ಗೆ ಚಿಕ್ಕ ವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. ಶಾಲಾ-ಕಾಲೇಜು ದಿನಗಳಲ್ಲಿ ಮನೆಯವರಿಗೆ ಗೊತ್ತಿಲ್ಲದಂತೆಯೇ ಅವರು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಅವರ ಮೂಲ ಹೆಸರು ಮುನಿ ಚೌಡಪ್ಪ. ಬಳಿಕ ಅವರು ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್​ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ‘ತಲಾತಪಸ್ವಿ’ ರಾಜೇಶ್​ ಎಂದೇ ಜನಮಾನ್ಯತೆಯನ್ನು ಪಡೆದಿದ್ದ ಇವರು 1960ರ ದಶಕದಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಮೂಲಕ  ನೂರಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next