Advertisement

ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ನಿಧನ

08:39 AM Jan 10, 2022 | Team Udayavani |

ಬೆಂಗಳೂರು: ಕವಿ, ನಾಟಕಕಾರ, ಕನ್ನಡ ಪರ ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಚಂಪಾ ಎಂದೇ ಪ್ರಸಿದ್ದರಾಗಿದ್ದ ಚಂದ್ರಶೇಖರ ಪಾಟೀಲ (83 ವ) ಅವರು ಇಂದು ನಿಧನರಾದರು.

Advertisement

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರಶೇಖರ ಪಾಟೀಲ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಚಂದ್ರಶೇಖರ ಪಾಟೀಲರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಇಂಗ್ಲಿಷ್ ಎಂ.ಎ. ಪದವಿ ಗಳಿಸಿದ್ದರಲ್ಲದೆ ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾ ಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮಾ ಪಡೆದರು.

ಚಂದ್ರಶೇಖರ ಪಾಟೀಲರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್‌ ಉಪನ್ಯಾಸಕರಾಗಿ ಬೋಧಕ ವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿದ್ದರು.

ಇದನ್ನೂ ಓದಿ:ಸಹಕಾರ ಸಚಿವ ಪುತ್ರನಿಗೆ ಬ್ಲ್ಯಾಕ್‌ ಮೇಲ್‌: ಜ್ಯೋತಿಷಿ ಪುತ್ರ ಸಿಸಿಬಿ ಪೊಲೀಸ್‌ ವಶಕ್ಕೆ

Advertisement

ಹೊಂಗನಸ ಹಡಗು, ನಾಳಿಗಿದೋ ಸ್ವಾಗತ, ಚರಿಪನಾದವೊ ಹಾಡು ಹಕ್ಕಿಯೋ ಮುಂತಾದ ಕವನಗಳು; ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ ಮುಂತಾದ ನಾಟಕಗಳಿಂದ ಚಂಪಾ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next