Advertisement

Kannada Serial; ಸ್ಟಾರ್ ಸುವರ್ಣದಲ್ಲಿ ‘ಗೌರಿ ಶಂಕರ’

11:00 AM Nov 13, 2023 | Team Udayavani |

ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಗೌರಿ ಶಂಕರ ಎಂಬ ಹೊಸ ಧಾರಾವಾಹಿಯೊಂದು ಸೋಮವಾರದಿಂದ ರಾತ್ರಿ 7 ಗಂಟೆಗೆ ಪ್ರಸಾರವಾಗಲಿದೆ. ಕರ್ನಾಟಕದ ಸುಂದರ ತಾಣ ಹಾಸನಾಂಬೆಯ ತವರೂರಾದ ಹಾಸನದಲ್ಲಿ ಈ ಕತೆಯು ಕೇಂದ್ರೀಕೃತವಾಗಿರುತ್ತದೆ. ಈ ಧಾರಾವಾಹಿಯ ನಾಯಕಿ “ಗೌರಿ’ ಸಮಾಜದಲ್ಲಿ ಘನತೆ ಗೌರವವನ್ನು ಹೊಂದಿರುವ ಪರಿವಾರದಲ್ಲಿ ಬೆಳೆದಿರುವ ಈಕೆ ಯಾರನ್ನೂ ನೋಯಿಸದ ಮುಗ್ಧ ಮನಸ್ಸಿನ ಕಣ್ಮಣಿ. ಆದರೆ ಸಮಯ ಬಂದರೆ ತನ್ನ ನಿಲುವನ್ನು ಸ್ಪಷ್ಟವಾಗಿ ಮಾತನಾಡಬಲ್ಲ ಧೈರ್ಯವಂತೆ ಕೂಡ.

Advertisement

ಇನ್ನು ಕಥಾ ನಾಯಕ “ಶಂಕರ’ ಅಲಿಯಾಸ್‌ ಜೋಗಿ, ಹೆಣ್ಣು ಮಕ್ಳು ಅಂದ್ರೆ ನಾಲ್ಕುಗೋಡೆ ಮಧ್ಯೆ ಇರ್ಬೇಕು ಅಂತ ನಂಬಿರೋ ಮನೆತನದಲ್ಲಿ ಬೆಳೆದವ. ಈತ ನೋಡೋಕೆ ರಫ್ ಆದ್ರೆ ಮಗುವಿನಂತ ಮನಸ್ಸು. ತನಗನಿಸಿದ್ದನ್ನು ಮಾಡಲೇಬೇಕು ಅನ್ನೋ ಹಠವಾದಿ. ಒಂದು ಕಡೆ ಶಾಂತಿ, ಸಹನೆ, ತಾಳ್ಮೆಯಿಂದ ಕೂಡಿದ ಗೌರಿ ಪರಿವಾರ. ಮತ್ತೂಂದೆಡೆ ಅಧಿಕಾರ, ದರ್ಪ, ಹಣ ತುಂಬಿರೋ ಶಂಕರನ ಪರಿವಾರ. ಈ ಎರಡೂ ತದ್ವಿರುದ್ಧ ಭಾವಗಳನ್ನು ಹೊಂದಿರುವ ಇವರಿಬ್ಬರ ನಡುವೆ ನಡೆಯುವ ಘರ್ಷಣೆ, ಸಂಧಾನ, ಪ್ರೇಮಾಂಕುರವೇ ಈ ಧಾರಾವಾಹಿಯ ಮುಖ್ಯಕಥಾ ಹಂದರ.

ಗೌರಿಶಂಕರ ಧಾರಾವಾಹಿಯಲ್ಲಿ ನಾಯಕನಾಗಿ ಯಶವಂತ್‌, ನಾಯಕಿಯಾಗಿ ಕೌಸ್ತುಭಮಣಿ ನಟಿಸುತ್ತಿದ್ದಾರೆ. ಜೊತೆಗೆ ಜನಪ್ರಿಯ ಕಲಾವಿದರಾದ ವಿದ್ಯಾಮೂರ್ತಿ, ಮೋಹನ್‌, ಕೀರ್ತಿ ಭಾನು ಸೇರಿದಂತೆ ಇನ್ನು ಹಲವಾರು ಕಲಾವಿದರು ಅಭಿನಯಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next