ಥಾಣೆ: ನವೋದಯ ಕನ್ನಡ ಸೇವಾ ಸಂಘದ ಸುವರ್ಣ ಮಹೋತ್ಸವ ಸರಣಿ ಕಾರ್ಯಕ್ರಮ-6 ಸಂಭ್ರಮವು ನ. 9ರಂದು ಥಾಣೆಯ ಕಾಶಿನಾಥ್ ಘಾಣೇಕರ್ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ನವೋದಯ ಕನ್ನಡ ಸೇವಾ ಸಂಘ ಥಾಣೆ ಅಧ್ಯಕ್ಷ ಜಯ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸ್ಥಾಪಕ ಹಿರಿಯ ಪದಾಧಿಕಾರಿಗಳನ್ನು, ಪೂರ್ವಕಾರ್ಯಕಾರಿ ಸಮಿತಿಯ ಸದಸ್ಯರನ್ನು, ಸಂಘದ ಏಳ್ಗೆಗಾಗಿ ಶ್ರಮಿಸಿ ಅಗಲಿದ ಚೇತನರ ಸ್ಮರಣಾರ್ಥಕವಾಗಿ ಅವರ ಪತ್ನಿ, ಪರಿವಾರದ ಸದಸ್ಯರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು. ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿದರು.
ಸಮಾರಂಭದ ವೇದಿಕೆಯಲ್ಲಿ ಥಾಣೆಯ ಮೇಯರ್, ತುಳು-ಕನ್ನಡತಿ ಮೀನಾಕ್ಷೀ ರಾಜೇಂದ್ರ ಶಿಂಧೆ ಪೂಜಾರಿ, ಥಾಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಕುಶಲ್ ಸಿ. ಭಂಡಾರಿ, ಜಾಸ್ಮಿàನ್ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಡಾ| ಸುರೇಂದ್ರ ಶೆಟ್ಟಿ, ಕ್ರಿಸ್ಟಲ್ ಆಟೋಮೇಶನ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಚಂದ್ರಶೇಖರ್ ಎಸ್. ಶೆಟ್ಟಿ, ಸಂಘದ ಉಪಾಧ್ಯಕ್ಷ ಕೇಶವ ಟಿ. ನಾಯಕ್ ಹಾಗೂ ನವೋದಯ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕಿ ಅಜಿತಾ ಪ್ರದೀಪ್ ಕುಮಾರ್ ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನುರಾಧಾ ಅರ್ಜುನ್ ವಾಡ್ಕರ್ ಉಪಸ್ಥಿತರಿದ್ದರು.
ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ ಎಸ್. ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿ-ಗಣ್ಯರನ್ನು ಗೌರವ ಪ್ರಧಾನ ಕೋಶಾಧಿಕಾರಿ ಸುನೀಲ್ ಎಸ್. ಶೆಟ್ಟಿ, ಉಪಾಧ್ಯಕ್ಷ ಕೇಶವ ಟಿ. ನಾಯಕ್, ಜತೆ ಕಾರ್ಯದರ್ಶಿ ಪ್ರಶಸ್ಥ ಎಸ್. ಶೆಟ್ಟಿ, ಜೊತೆ ಕೋಶಾಧಿಕಾರಿ ದಯಾನಂದ್ ಬಿ. ಹೆಗ್ಡೆ ಅವರು ಪರಿಚಯಿಸಿದರು. ಅಧ್ಯಕ್ಷ ಜಯ ಕೆ. ಶೆಟ್ಟಿ ಅವರು ಅತಿಥಿ-ಗಣ್ಯರುಗಳನ್ನು ಶಾಲು ಹೊದೆಸಿ, ಪುಷ್ಪಗುಚ್ಚ, ಸ್ಮರಣಿಕೆಯನ್ನಿತ್ತು ಗೌರವಿಸಿದರು.
ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ವೇದಿಕೆಯಲ್ಲಿ ಅತಿಥಿ-ಗಣ್ಯರೊಂದಿಗೆ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯ ರವಿ ಹೆಗ್ಡೆ ಹೆರ್ಮುಂಡೆ ಕಾರ್ಯಕ್ರಮ ನಿರ್ವಹಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ದಯಾನಂದ ಎಸ್. ಶೆಟ್ಟಿ ವಂದಿಸಿದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.