Advertisement
ಶೇಷಾದ್ರಿಪುರ ಪದವಿ ಪೂರ್ವ ಕಾಲೇಜು ಗುರುವಾರ ಹಮ್ಮಿಕೊಂಡಿದ್ದ 63ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಕ್ಷೇತ್ರಗಳಲ್ಲಿ ಕನ್ನಡ ಭಾಷೆಯ ಅವಗಣನೆಯಾಗುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸುವ ಅಗತ್ಯವಿದೆ ಎಂದು ಹೇಳಿದರು.
Related Articles
Advertisement
ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ ಮಾತನಾಡಿ, ಕರ್ನಾಟಕ ಹೋರಾಟದಲ್ಲಿ ಜಯದೇವಿ ತಾಯಿ ಲಿಂಗಾಡೆ, ಬಳ್ಳಾರಿ ಸಿದ್ಧಮ್ಮ ಅಂತಹ ವೀರ ಮಹಿಳೆಯರು ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಏಕೀಕರಣದಲ್ಲಿ ಪಾಲ್ಗೊಂಡಿದ್ದ ಮಹಿಳೆಯ ಹೋರಾಟವನ್ನು ದಾಖಲು ಮಾಡುವ ಕೆಲಸ ನಡೆಯುವ ಅಗತ್ಯವಿದೆ ಎಂದು ತಿಳಿಸಿದರು.
ಶೇಷಾದ್ರಿಪುರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ನಾರಾಯಣ ಸ್ವಾಮಿ, ಶೇಷಾದ್ರಿಪುರ ಶಿಕ್ಷಣ ದತ್ತಿ ಅಧ್ಯಕ್ಷ ಬಿ.ಎಂ.ಪಾರ್ಥಸಾರಥಿ, ರಂಗಭೂಮಿ ಕಲಾವಿದೆ ಸ್ಪಶಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಹೈದರಾಬಾದ್‌ನ ನಿಜಾಮರು ಕರ್ನಾಟಕಕ್ಕೆ ಹೈದ್ರಾಬಾದ್‌ಅನ್ನು ನೀಡಲು ನಿರಾಕರಿಸಿದಾಗ ಸೈನಿಕರ ಬಲವಂತದ ಮೂಲಕ ಈ ಪ್ರಾಂತ್ಯವನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಲಾಯಿತು. ಕರ್ನಾಟಕ ಏಕೀಕರಣಕ್ಕೆ ಒಂದು ದೊಡ್ಡ ಹೋರಾಟವಿದ್ದು, ಒಡಕಿನ ಮಾತಾಡುವವರು ಇತಿಹಾಸದ ಬಗ್ಗೆ ಅರಿಯಬೇಕು. -ಇಂದಿರಾ ಕೃಷ್ಣಪ್ಪ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಗೌರವ ಕಾರ್ಯದರ್ಶಿ